ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೇಶದಲ್ಲಿ ಕಾಂಗ್ರೆಸ್‌ ಪ್ರಬಲವಾಗಬೇಕು: ನಿತಿನ್ ಗಡ್ಕರಿ ಹೀಗೆ ಅಂದಿದ್ಯಾಕೆ?

ಮುಂಬೈ: 'ಪ್ರಜಾಪ್ರಭುತ್ವ ಬಲಗೊಳ್ಳಲು ಪ್ರಬಲ ವಿರೋಧಪಕ್ಷ ಅಗತ್ಯವಿದೆ. ಕಾಂಗ್ರೆಸ್‌ ಪಕ್ಷ ರಾಷ್ಟ್ರೀಯ ಮಟ್ಟದಲ್ಲಿ ಆ ನಿಟ್ಟಿನಲ್ಲಿ ಪ್ರಬಲವಾಗಲಿ ಎಂದು ಹೃದಯಪೂರ್ವಕವಾಗಿ ಆಶಿಸುತ್ತೇನೆ. ಕಾಂಗ್ರೆಸ್‌ ದುರ್ಬಲಗೊಂಡಂತೆ ಆ ಸ್ಥಳವನ್ನು ಪ್ರಾದೇಶಿಕ ಪಕ್ಷಗಳು ಆವರಿಸಿಕೊಳ್ಳುತ್ತಿವೆ. ಈ ಬೆಳವಣಿಗೆಯು ಪ್ರಜಾಪ್ರಭುತ್ವದ ದೃಷ್ಟಿಯಿಂದ ಉತ್ತಮ ಬೆಳವಣಿಗೆಯಲ್ಲ ಎಂದು ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

2,344 ಕೋಟಿ ರೂ. ವೆಚ್ಚದ ಹೆದ್ದಾರಿ ಯೋಜನೆಗಳಿಗೆ ಚಾಲನೆ ನೀಡಿ ಭಾನುವಾರ ಮಾತನಾಡಿದ ಅವರು, 'ಪ್ರಜಾಪ್ರಭುತ್ವ ಎಂಬುದು ಎರಡು ಚಕ್ರಗಳ ಮೇಲೆ ಸಾಗಲಿದೆ. ಒಂದು ಆಡಳಿತ ಪಕ್ಷ, ಮತ್ತೊಂದು ವಿರೋಧಪಕ್ಷ. ಇದೇ ಕಾರಣದಿಂದ ಕಾಂಗ್ರೆಸ್‌ ಬಲಗೊಳ್ಳಬೇಕು ಎಂಬುದು ನನ್ನ ಅಪೇಕ್ಷೆ' ಎಂದು ತಿಳಿಸಿದರು.

ಗಡ್ಕರಿ ಅವರ ಹೇಳಿಕೆಯನ್ನು ಮಹಾರಾಷ್ಟ್ರ ಕಾಂಗ್ರೆಸ್‌ ನಾಯಕ ಸಚಿನ್ ಸಾವಂತ್ ಸ್ವಾಗತಿಸಿದರು. ಬಳಿಕ ಮಾತನಾಡಿದ ಅವರು, 'ಬಿಜೆಪಿ ವಿರೋಧಪಕ್ಷಗಳನ್ನು ನಾಶಪಡಿಸಲಿದೆ ಎಂದು ಪ್ರತಿಪಾದಿಸುವ ಪ್ರಧಾನಿ ಜೊತೆಗೂ ಈ ವಿಚಾರ ಚರ್ಚಿಸಿ' ಎಂದು ನಿತಿನ್ ಗಡ್ಕರಿ ಅವರಿಗೆ ಹೇಳಿದ್ದಾರೆ.

Edited By : Vijay Kumar
PublicNext

PublicNext

29/03/2022 02:29 pm

Cinque Terre

34.43 K

Cinque Terre

8

ಸಂಬಂಧಿತ ಸುದ್ದಿ