ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಚಿತ ಪಡಿತರ ನಂತರ, ಉಚಿತ ಊಟ ನೀಡಲು ಯೋಗಿ ಸರ್ಕಾರ ಚಿಂತನೆ

ಲಕ್ನೋ : ಎರಡನೇ ಬಾರಿಗೆ ಉತ್ತರ ಪ್ರದೇಶದ ಸಿಎಂ ಪಟ್ಟ ಅಲಂಕರಿಸಿದ ಯೋಗಿ ಆದಿತ್ಯ ನಾಥ್, ಉತ್ತರ ಪ್ರದೇಶದಲ್ಲಿ ಉಚಿತ ಪಡಿತರ ನಂತರ, ಉಚಿತ ಊಟ ನೀಡಲು ಸರ್ಕಾರ ಸಿದ್ಧತೆ ಮಾಡಲಾಗುತ್ತಿದೆ. ಯೋಗಿ ಆದಿತ್ಯನಾಥ್ ಮೊದಲ ಸಂಪುಟ ಸಭೆಯಲ್ಲಿ ಉಚಿತ ಪಡಿತರ ಯೋಜನೆಯನ್ನು ವಿಸ್ತರಿಸಿದ್ದರು.

ಇದೀಗ ಬಡವರು ಮತ್ತು ವಂಚಿತರಿಗೆ ಉಚಿತ ಅಥವಾ ಹೆಚ್ಚಿನ ಸಬ್ಸಿಡಿಯೊಂದಿಗೆ ಊಟ ನೀಡುವ ಸಲುವಾಗಿ ರಾಜ್ಯಾದ್ಯಂತ ಸಮುದಾಯ ಅಡುಗೆಮನೆಗಳನ್ನು ಸ್ಥಾಪಿಸುವ ಯೋಜನೆ ಹೊಂದಿದ್ದಾರೆ.

ಉತ್ತರ ಪ್ರದೇಶ ಸರ್ಕಾರ 2020ರಿಂದ ಪ್ರತಿ ತಿಂಗಳು 15 ಕೋಟಿ ಫಲಾನುಭವಿಗಳಿಗೆ ಉಚಿತ ಪಡಿತರವನ್ನು ವಿತರಿಸುತ್ತಿದೆ. ಅಧಿಕೃತ ಮೂಲಗಳ ಪ್ರಕಾರ, ಯೋಗಿ ಸರ್ಕಾರವು ಬಡವರಿಗೆ ಉಚಿತವಾಗಿ ಅಥವಾ ಅತ್ಯಲ್ಪ ಬೆಲೆಯಲ್ಲಿ ಬೇಯಿಸಿದ ಪೌಷ್ಟಿಕಾಂಶದ ಆಹಾರವನ್ನು ಒದಗಿಸಲು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಮುದಾಯ ಅಡುಗೆ ಮನೆಗಳನ್ನು ಸ್ಥಾಪಿಸಲು ಸಿದ್ಧತೆ ನಡೆಸಿದೆ.

Edited By : Nirmala Aralikatti
PublicNext

PublicNext

30/03/2022 02:20 pm

Cinque Terre

62.21 K

Cinque Terre

25

ಸಂಬಂಧಿತ ಸುದ್ದಿ