ಮೈಸೂರು: ಭಾರತೀಯ ಜನತಾ ಪಾರ್ಟಿ ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ 140 ಸ್ಥಾನಗಳನ್ನ ಗೆಲುತ್ತದೆ. ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೂ ಬರುತ್ತದೆ. ಹೀಗಂತ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈಗಲೇ ಭವಿಷ್ಯ ನುಡಿದಿದ್ದಾರೆ.
ಏಪ್ರಿಲ್-01 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕಕ್ಕೆ ಬರುತ್ತಿದ್ದಾರೆ. ಮೂರ್ನಾಲ್ಕು ತಂಡದಲ್ಲಿ ರಚಿಸಿಕೊಂಡು ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಸರ್ಕಾರದ ಸಾಧನೆಯನ್ನ ಜನರಿಗೆ ಮನವರಿಕೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಸುತ್ತೂರು ಮಠಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರವಾಸ ಮುಂಬರೋ ಚುನಾವಣೆಗೆ ಅನುಕೂಲಕರ ವಾತಾವರಣ ಸೃಷ್ಟಿಯಾಗಲಿದೆ ಎಂದು ಯಡಿಯೂರಪ್ಪ ವಿವರಿಸಿದರು.
PublicNext
30/03/2022 03:18 pm