ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪ್ರಜಾಪ್ರಭುತ್ವ ಜೀವಂತವಾಗಿದ್ದರೆ ಸಾಲದು, ಆರೋಗ್ಯಕರವಾಗಿರಬೇಕು: ಸಿಎಂ ಬೊಮ್ಮಾಯಿ

ಬೆಂಗಳೂರು: ಪ್ರಜಾಪ್ರಭುತ್ವ ಜೀವಂತವಾಗಿದ್ದರಷ್ಟೇ ಸಾಲದು, ಅದು ಆರೋಗ್ಯಕರವಾಗಿರಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಚುನಾವಣಾ ಸುಧಾರಣೆ ಕುರಿತಾಗಿ ವಿಧಾನಸಭೆ ಕಲಾಪದಲ್ಲಿ ಬುಧವಾರ ಮಾತನಾಡಿದ ಅವರು "ಕೇವಲ ಚುನಾವಣೆ ಶುದ್ಧೀಕರಣವಾದರೆ ದೇಶ ಸುಧಾರಿಸುವುದಿಲ್ಲ. ಶೈಕ್ಷಣಿಕ, ಸಾಂಸ್ಕೃತಿಕ ರಂಗವೂ ಶುದ್ಧವಾಗಬೇಕು. ನಾಗರಿಕ ಸಮಾಜವೂ ಅಷ್ಟೊಂದು ಪ್ರಭಾವಶಾಲಿಯಾಗಿಲ್ಲ. ಮೊದಲು ನಾಗರಿಕ ಸಮಾಜದ ಬಗ್ಗೆ ಭಯ ಇತ್ತು. ಈಗ ಆ ಮಟ್ಟಕ್ಕೆ ನಾಗರಿಕ ಸಮಾಜವೂ ಇಲ್ಲ" ಎಂದರು. ನಮ್ಮ ದೇಶ ಹಲವು ರೀತಿಯ ಹಿನ್ನೆಲೆ ಮತ್ತು ಇತಿಹಾಸ ಹೊಂದಿದೆ. ತಮಿಳುನಾಡಿನಿಂದ ದೇಶವನ್ನು ನೋಡುವ ದೃಷ್ಠಿಕೋನ ಬೇರೆ ಇದೆ. ಈಶಾನ್ಯ ರಾಜ್ಯಗಳ ದೃಷ್ಠಿಕೋನ ಬೇರೆ ಇದೆ. ಆದರೂ, ಎಲ್ಲರೂ ಪ್ರಜಾಪ್ರಭುತ್ವವನ್ನು ಒಪ್ಪಿಕೊಂಡು ಬಂದಿದ್ದೇವೆ.

ನಮ್ಮ ದೇಶದ ಜನರಲ್ಲಿ ಒಂದು ಅಂತರ್ಗತ ಶಕ್ತಿ ಇದೆ. ಬೇರೆ ಬೇರೆ ರಾಷ್ಟ್ರಗಳು ಒಂದೇ ರೀತಿಯ ವ್ಯವಸ್ಥೆ ಇದ್ದರೂ, ಪ್ರಜಾಪ್ರಭುತ್ವ ಬುಡಮೇಲಾಗಿದೆ. ನಮ್ಮ ದೇಶದಲ್ಲಿ ಅಧಿಕಾರ ಹಸ್ತಾಂತರ ಅತ್ಯಂತ ಶಾಂತಿಯುತವಾಗಿ ನಡೆಯುತ್ತದೆ. ಅಮೆರಿಕದಂತ ದೇಶದಲ್ಲಿ ಕೂಡ ಅಧಿಕಾರ ಹಸ್ತಾಂತರವಾಗಲು ಎಷ್ಟು ಕಷ್ಟವಾಯಿತು ಎಂಬುದನ್ನು ನಾವು ನೋಡಿದ್ದೇವೆ. ಹೀಗಾಗಿ ಪ್ರಜಾಪ್ರಭುತ್ವ ಜೀವಂತವಾಗಿದ್ದರಷ್ಟೇ ಸಾಲದು, ಆರೋಗ್ಯವಾಗಿರಬೇಕು ಎಂದು ಬೊಮ್ಮಾಯಿ ಹೇಳಿದ್ದಾರೆ.

Edited By : Nagaraj Tulugeri
PublicNext

PublicNext

30/03/2022 07:30 pm

Cinque Terre

35.95 K

Cinque Terre

5

ಸಂಬಂಧಿತ ಸುದ್ದಿ