ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾವಣಗೆರೆ: ಧಮ್, ಗಂಡಸ್ತನ ಬಗ್ಗೆ ಕಾಂಗ್ರೆಸ್ ನವರಿಗೆ ಕುಮಾರಸ್ವಾಮಿ ಹೇಳಲಿ; ರೇಣುಕಾಚಾರ್ಯ

ದಾವಣಗೆರೆ: ಹಲಾಲ್ ವಿಚಾರಕ್ಕೆ ಸಂಬಂಧಿಸಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ಸಿಎಂ ಬಸವರಾಜ್ ಬೊಮ್ಮಾಯಿ ಬಗ್ಗೆ ಹಗುರವಾಗಿ ಮಾತನಾಡಿರುವುದು ಸರಿಯಲ್ಲ. ಧಮ್, ಗಂಡಸ್ತನದ ಬಗ್ಗೆ ಕಾಂಗ್ರೆಸ್ ನವರಿಗೆ ಹೇಳಲಿ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.

ಹೊನ್ನಾಳಿ ಪಟ್ಟಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಅವರಿಗೆ ಆಡಳಿತ ನಡೆಸಿ ಅನುಭವವಿದೆ. ಇಂಥ ಉನ್ನತ ಹುದ್ದೆಯಲ್ಲಿದ್ದವರು ಈ ರೀತಿ ಹೇಳಿಕೆ ಕೊಡುವುದು ಸರಿಯಲ್ಲ. ನಾನು ಇದನ್ನು ಖಂಡಿಸುತ್ತೇನೆ. ಕುಮಾರಸ್ವಾಮಿ ತನ್ನ ಹೇಳಿಕೆ ವಾಪಸ್ ಪಡೆಯಬೇಕು. ರಾಜ್ಯದ ಜನರ ಬೇಷರತ್ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದರು.

ಯಾವ ರೀತಿ ಆಡಳಿತ ನಡೆಸಬೇಕು. ಕಾನೂನು ಸುವ್ಯವಸ್ಥೆ ಹೇಗೆ ಕಾಪಾಡಬೇಕು ಎಂಬುದು ಸಿಎಂ ಬೊಮ್ಮಾಯಿ ಅವರಿಗೆ ಗೊತ್ತಿದೆ. ರಾಜಕಾರಣದ, ಆಡಳಿತದ ಅನುಭವ ಇದೆ. ಸಂಘರ್ಷಕ್ಕೆ ಅವಕಾಶ ಕೊಡಲ್ಲ, ಸಾಮರಸ್ಯ ಕಾಪಾಡಬೇಕು ಎಂಬುದು ಎಲ್ಲರ ಅಪೇಕ್ಷೆ. ನಮ್ಮ ನಿಲುವು ಕೂಡ ಇದೇ ಆಗಿದೆ. ಕೇಂದ್ರದಲ್ಲಿ ನರೇಂದ್ರ ಮೋದಿ, ರಾಜ್ಯದಲ್ಲಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರ ಇದೆ. ಹಿಜಾಬ್, ಕಾಶ್ಮೀರಿ ಫೈಲ್ಸ್, ಭಗವದ್ಗೀತೆ, ಹಲಾಲ್ ವಿವಾದ ಹುಟ್ಟು ಹಾಕಿದ್ದು ಕಾಂಗ್ರೆಸ್ ಮುಖಂಡರು. ಕಾಂಗ್ರೆಸ್ ಮುಖಂಡರು ನಿರಂತರ ವಿವಾದ ಹುಟ್ಟು ಹಾಕಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

Edited By : Nagesh Gaonkar
PublicNext

PublicNext

31/03/2022 07:54 pm

Cinque Terre

38.96 K

Cinque Terre

4

ಸಂಬಂಧಿತ ಸುದ್ದಿ