ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಾರಿಗೆ ಸೌಲಭ್ಯ ಸರ್ಕಾರಿ ಶಾಲೆ ಮಕ್ಕಳಿಗೂ ಸಿಗಲಿದೆ

ಬೆಂಗಳೂರು:ರಾಜ್ಯದ ಸರ್ಕಾರಿ ಶಾಲೆ ಮಕ್ಕಳಿಗೆ ಸಾರಿಗೆ ವ್ಯವಸ್ಥೆಯನ್ನ ಮಾಡಲಾಗುವುದು. ಈ ಬಗ್ಗೆ ಈಗಾಗಲೇ ಅನೇಕ ಖಾಸಗಿ ಕಂಪನಿಗಳೊಂದಿಗೆ ಒಪ್ಪಂದಕ್ಕೆ ಸಹಿಹಾಕಲಾಗುತ್ತಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ರಾಜ್ಯದ ವಿವಿಧ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರೋ ಎಲ್ಲ ಸೌಲಭ್ಯ ಇರೋ ಶಾಲೆಗಳನ್ನ ಆಯ್ಕೆ ಮಾಡಲಾಗುತ್ತಿದೆ. ಆ ಶಾಲೆಗಳಲ್ಲಿ ತರಗತಿಗೊಬ್ಬ ಶಿಕ್ಷಕರನ್ನ ನೇಮಿಸಲಾಗುತ್ತಿದೆ.

ಇದರಿಂದ ಆ ಶಾಲೆಯ ಶಿಕ್ಷಣ ಗುಣಮಟ್ಟ ಹೆಚ್ಚಳ ಆಗುತ್ತದೆ. ಇಂತಹ ಶಾಲೆಗಳಿಗೆ ಮಕ್ಕಳನ್ನ ಆಕರ್ಷಿಸಿ ಶಾಲೆಗೆ ಕರೆತರಲು ವಾಹನ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿವರಿಸಿದ್ದಾರೆ.

Edited By :
PublicNext

PublicNext

01/04/2022 07:39 am

Cinque Terre

35.15 K

Cinque Terre

1

ಸಂಬಂಧಿತ ಸುದ್ದಿ