ಬೆಂಗಳೂರು: ಹಲಾಲ್ ಬಾಯ್ಕಾಟ್ ಕೂಗು ಜೋರಾಗಿಯೇ ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿಯೇ ವಿಶ್ವ ಹಿಂದೂ ಪರಿಷತ್ ಅನ್ನ ಮಾಜಿ ಸಿಎಂ ಎಚ್.ಡಿ.ಕುಮಾರ್ ಸ್ವಾಮಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಹಲಾಲ್ ಕಟ್ ಬಾಯ್ಕಾಟ್ ಮಾಡಿ. ಜಟ್ಕಾ ಕಟ್ ಮಾಡಿರೋ ಮಾಂಸವನ್ನೇ ಖರೀದಿಸಿ ಅಂತಲೇ ಈಗ ಅಭಿಯಾನ ಶುರು ಆಗಿದೆ. ಕರಪತ್ರಗಳನ್ನೂ ಹಂಚಲಾಗುತ್ತಿದೆ.
ಇದನ್ನ ವಿರೋಧಿಸಿರೋ ಎಚ್.ಡಿ.ಕುಮಾರ್ ಸ್ವಾಮಿ ಅವ್ರು, ಕರಪತ್ರಗಳನ್ನು ಹಂಚಿ ಸಮಾಜ ಒಡೆಯುತ್ತಿರುವ ವಿಶ್ವ ಹಿಂದೂ ಪರಿಷತ್, ಬಜರಂಗದಳದ ಬಗ್ಗೆ ನನ್ನ ಹೇಳಿಕೆಯಲ್ಲಿ ಯಾವ ಬದಲಾವಣೆಯೂ ಇಲ್ಲ.
ಧರ್ಮ-ಜಾತಿ ಆಧಾರದ ಮೇಲೆ ಜನರನ್ನು ವಿಘಟಿಸುವ ಇಂಥ ಸಂಘಟನೆಗಳ ಕಿಡಿಗೇಡಿಗಳ ಬಗ್ಗೆ ನನ್ನ ನಿಲುವು ಅಚಲ. 'ಧರ್ಮೋದ್ಧಾರದ ಸೋಗಿನಲ್ಲಿ ಅಶಾಂತಿ' ಸೃಷ್ಟಿಸುವ ಕೃತ್ಯವನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಟ್ವಿಟರ್ ಮೂಲಕ ಹೇಳಿಕೊಂಡಿದ್ದಾರೆ.
PublicNext
01/04/2022 12:01 pm