ಬೆಂಗಳೂರು: 2023ರಲ್ಲಿ ನಡೆಯುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆದ್ದು ಸ್ಪಷ್ಟ ಬಹುಮತ ಪಡೆಯುವ ಗುರಿ ಹೊಂದಬೇಕು ಅದಕ್ಕಾಗಿ ಎಲ್ಲರೂ ಒಗ್ಗಟ್ಟಿನಿಂದ ಹೋರಾಟ ನಡೆಸಬೇಕು ಎಂದು ಕಾಂಗ್ರೆಸ್ ಪಕ್ಷದ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ.
ಶುಕ್ರವಾರ ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿಯ ಕೋಮುವಾದ ಮತ್ತು ದ್ವೇಷದ ರಾಜಕಾರಣದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ನಿರಂತರವಾಗಿ ಹೋರಾಟ ನಡೆಸಬೇಕು ಎಂದು ಕರೆ ನೀಡಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ 150ಕ್ಕಿಂತ ಒಂದು ಸ್ಥಾನವೂ ಕಡಿಮೆಯಾಗಬಾರದು. ಅರ್ಹತೆ ಮತ್ತು ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸಲಾಗುವುದು. ಅಧಿಕಾರಕ್ಕೆ ಬಂದ ನಂತರವೂ ಪಕ್ಷಕ್ಕೆ ರಕ್ತ ಬಸಿಯುವವರಿಗೆ ಆದ್ಯತೆ ನೀಡಲಾಗುವುದು’ ಎಂದು ರಾಹುಲ್ ಗಾಂದಿ ಹೇಳಿದ್ದಾರೆ.
PublicNext
01/04/2022 10:19 pm