ಬೆಂಗಳೂರು: ಮಾಜಿ ಮುಖ್ಯಂತ್ರಿ ಎಚ್.ಡಿ.ಕುಮಾರ್ ಸ್ವಾಮಿ ಯುಗಾದಿ ಹಬ್ಬದ ದಿನದಂದೂ ಗರಂ ಆಗಿದ್ದಾರೆ. ನೇರಾ ನೇರವಾಗಿ ಬಿಜೆಪಿಯನ್ನ ಟೀಕಿಸದೇ ಪರೋಕ್ಷವಾಗಿಯೇ ಬಿಜೆಪಿಯನ್ನ ಟೀಕಿಸಿ ಹೊಸ ವರ್ಷದ ಈ ದಿನ ರಾಜ್ಯದ ಜನತೆಗೆ ಶುಭ ಹಾರೈಸಿದ್ದಾರೆ. ಒಂದು ಸಂಕಲ್ಪವನ್ನೂ ಮಾಡೋಣ ಅಂತಲೇ ಹೇಳಿದ್ದಾರೆ.
ಯುಗಾದಿ ಪರ್ವದಿನದಂದು ನಾವೆಲ್ಲ ಒಂದು ಸಂಕಲ್ಪ ಮಾಡೋಣ.ಕರ್ನಾಟಕವು ಕರ್ನಾಟಕವಾಗಿಯೇ ಉಳಿಯಬೇಕೆಂಬ ಆಶಯದಿಂದಲೇ ಈ ಸಂಕಲ್ಪ.ಅಧಿಕಾರಕ್ಕಾಗಿ ಏನನ್ನೂ ಮಾಡಲು ಹೇಸದ ಕಿಡಿಗೇಡಿಗಳಿಗೆ, ಧರ್ಮವಿನಾಶಕ್ಕೆ ಕಂಕಣತೊಟ್ಟ ಕಿರಾತಕರಿಗೆ ಪಾಠ ಕಲಿಸುವ ಧೈರ್ಯ ಮಾಡೋಣ. ಕರ್ನಾಟಕ ನಮ್ಮದು. ಧರ್ಮದ ಹೆಸರಿನಲ್ಲಿ ಜನರನ್ನು ಒಡೆಯುವ ದ್ರೋಹಿಗಳದ್ದಲ್ಲ.
ಅನಾದಿ ಕಾಲದಿಂದ ಯುಗಾದಿ, ವರ್ಷತೊಡಕನ್ನು ನಾವೆಲ್ಲರೂ ಆಚರಿಸಿದಂತೆ, ಈ ವರ್ಷವೂ ಆಚರಿಸೋಣ. ʼಭಾರತವನ್ನು ಒಡೆಯುವ ವಿಷಬೀಜಾಸುರರನ್ನು ಹಿಮ್ಮೆಟ್ಟಿಸೋಣ.ʼ ಸರ್ವ ಜನಾಂಗದ ತೋಟ ಕರುನಾಡಿನಲ್ಲಿರುವ ಪ್ರತಿಯೊಬ್ಬರಿಗೂ ನನ್ನ ಮನವಿ ಇದು. ಇಡೀ ದೇಶಕ್ಕೆ ಮಾದರಿಯಾದ ನೆಮ್ಮದಿಯ ಕರುನಾಡನ್ನು ಕಾಪಾಡಿಕೊಳ್ಳೋಣ.
ಕರ್ನಾಟಕವು ಎಲ್ಲರನ್ನೂ ಒಳಗೊಳ್ಳುವ ಶುದ್ಧ ಅಂತಃಕರಣದ ಮನಸುಗಳದ್ದು. ಭಾವನೆಗಳ ಕೆಂಡದ ಮಳೆ ಸುರಿಸುವ ಕಿರಾತಕರದ್ದಲ್ಲ. ಜನಪೀಡಕರನ್ನು ತಿರಸ್ಕರಿಸೋಣ. ಪರಂಪರಾಗತವಾಗಿ ಬಂದಿರುವ ಯುಗಾದಿ, ವರ್ಷತೊಡಕನ್ನು ಎಂದಿನಂತೆ ಸಂಭ್ರಮಿಸುವ ಮೂಲಕ ಇವರ ಸೋಗಲಾಡಿತನಕ್ಕೆ ಇತಿಶ್ರೀ ಹಾಡೋಣ.
ಹೀಗಂತೆ ಸರಣಿ ಟ್ವಿಟ್ ಮಾಡೋ ಮೂಲಕ ರಾಜ್ಯದ ಜನತೆಗೆ ಯುಗಾದಿ ಹಬ್ಬದ ಶುಭಾಶಯಗಳನ್ನ ಎಚ್‌ಡಿಕೆ ಈಗ ತಿಳಿಸಿದ್ದಾರೆ.
PublicNext
02/04/2022 01:54 pm