ಮುಂಬೈ: ಸರ್ಕಾರ ಮಸೀದಿಗಳಲ್ಲಿನ ಲೌಡ್ ಸ್ಪೀಕರ್ ತೆಗೆಸದಿದ್ದರೆ ನಾವು ಮಸೀದಿ ಮುಂದೆ ಲೌಡ್ ಸ್ಪೀಕರ್ ಹಾಕಿ ಹನುಮಾನ್ ಚಾಲೀಸ ಬಿತ್ತರಿಸುವುದಾಗಿ ಮಹಾರಾಷ್ಟ್ರ ನವನಿರ್ಮಾಣ ಸೇನಾ (ಎಂಎನ್ಎಸ್) ಮುಖಂಡ ರಾಜ್ ಠಾಕ್ರೆ ಸರ್ಕಾರಕ್ಕೆ ಸವಾಲ್ ಹಾಕಿದ್ದಾರೆ.
ರ್‍ಯಾಲಿಯೊಂದರಲ್ಲಿ ಮಾತನಾಡಿದ ಅವರು, ನಾನು ಪ್ರಾರ್ಥನೆಗೆ ವಿರೋಧಿಯಲ್ಲ, ಆದರೆ ಮಸೀದಿಯಲ್ಲಿ ಲೌಡ್ ಸ್ಪೀಕರ್ ಹಾಕಬಾರದು ಎಂದು ಅಲ್ಲಿನ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಇನ್ನು ಉತ್ತರಪ್ರದೇಶದ ಸರ್ಕಾರದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿರುವ ಅವರು, ಅಲ್ಲಿ ಉತ್ತಮ ಅಭಿವೃದ್ಧಿ ಆಗುತ್ತಿದೆ, ಅಂಥದ್ದೇ ಅಭಿವೃದ್ಧಿಯನ್ನು ಮಹಾರಾಷ್ಟ್ರದಲ್ಲಿ ಬಯಸುತ್ತಿರುವುದಾಗಿ ಹೇಳಿದ್ದಾರೆ. ಜತೆಗೆ ತಾವು ಹಿಂದುತ್ವದ ವಿಚಾರವಾಗಿ ಮಾತನಾಡಲಿರುವುದಾಗಿ ಹೇಳಿರುವ ಅವರು ಅಯೋಧ್ಯೆಗೆ ಭೇಟಿ ನೀಡಲಿರುವುದನ್ನೂ ತಿಳಿಸಿದ್ದಾರೆ.
PublicNext
03/04/2022 08:18 am