ಬೆಂಗಳೂರು: ಬಾನೊಳಿರುವುದೆ ಪಕ್ಷಿ ಪಾರ್ವ ದಾರಿಯ ನಕ್ಷೆ? ಮೀನು ನೀರೊಳು ನುಸುಳೆ ಪಥನಿಯಮವಿಹುದೆ? ಏನೊ ಜೀವನವನೆಳೆವುದೇನೊ ನೂಕುವುದದನು ।ನೀನೊಂದು ಗಾಳಿಪಟ–ಮಂಕುತಿಮ್ಮ।। ಹೀಗೆ ಡಿವಿಜಿ ಅವರ ಕಗ್ಗವನ್ನು ಉಲ್ಲೇಖಿಸಿರುವ ರಾಜ್ಯ ಬಿಜೆಪಿ, ಮಾಜಿ ಸಿಎಂ ಕುಮಾರಸ್ವಾಮಿ ಅವರ ಮೇಲೆ ವಾಗ್ದಾಳಿ ನಡೆಸಿದೆ. 'ಎಚ್‌ಡಿಕೆ ಎಂದರೆ ಗಾಳಿಪಟ, ಸ್ವಂತಿಕೆ ಇಲ್ಲದ ರಾಜಕಾರಣಿ' ಎಂದು ಟೀಕಿಸಿದೆ.
ಸರಣಿ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, "ಕುಮಾರಸ್ವಾಮಿಯವರೇ, ನೀವೆಷ್ಟೇ ದಾರ್ಶನಿಕನ ಸೋಗು ಹಾಕಿದರೂ ಅದರ ಹಿಂದಿರುವುದು ಪ್ರತ್ಯೇಕ ಲೆಕ್ಕಾಚಾರವೇ. ನಿಮ್ಮಂತವರ ಯೂಟರ್ನ್ ನೀತಿಗಾಗಿಯೇ ಕಗ್ಗದಲ್ಲಿ ಸಾಲೊಂದು ರಚಿತವಾಗಿದೆ" ಎಂದಿದೆ.
ಇನ್ನೊಂದು ಟ್ವೀಟ್‌ನಲ್ಲಿ "ಕರ್ನಾಟಕದ ರಾಜಕಾರಣದಲ್ಲಿ ಎಚ್‌ಡಿಕೆ ಅವರಂತಹ ಗಾಳಿಪಟದ ವ್ಯಕ್ತಿತ್ವ ಹೊಂದಿರುವ ರಾಜಕಾರಣಿ ಮತ್ತೊಬ್ಬರಿಲ್ಲ. ಆವ ಕಡೆ ಹಾರುವುದೋ? ಆವ ಕಡೆ ತಿರುಗುವುದೋ? ಆವಾಗಳಾವ ಕಡೆಗೆರಗುವುದೋ ಹಕ್ಕಿ! ಎಂಬಂತಿದೆ ಎಚ್‌ಡಿಕೆ ರಾಜಕೀಯ ಧೋರಣೆ. ಸ್ವಂತಿಕೆ ಇಲ್ಲದವರು ವಾಜಪೇಯಿ ಅವರಂಥವರನ್ನೂ ಟೀಕಿಸುವುದು ಚೋದ್ಯವಲ್ಲದೆ ಮತ್ತೇನು? ಎಂದು ರಾಜ್ಯ ಬಿಜೆಪಿ ಕುಮಾರಸ್ವಾಮಿ ಮೇಲೆ ವಾಗ್ದಾಳಿ ನಡೆಸಿದೆ.
PublicNext
04/04/2022 12:29 pm