ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಿಂಸೆಗೆ ಪ್ರಚೋದನೆ ನೀಡುವವರು ರಾವಣನ ಹೆಸರು ಇಟ್ಟುಕೊಳ್ಳಲಿ: ಕುಮಾರಸ್ವಾಮಿ

ಬೆಂಗಳೂರು: ಶ್ರೀರಾಮನ ಹೆಸರು ಇಟ್ಟುಕೊಂಡು ಶಾಂತಿ ಹಾಳು ಮಾಡುವ ಕೆಲಸ ಮಾಡದಿರಿ, ಅಂಥ ಕೃತ್ಯಗಳನ್ನು ಎಸಗಲು ರಾವಣನ ಹೆಸರಿಟ್ಟುಕೊಳ್ಳಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕೆಲ ಸಂಘಟನೆಗಳ ಮೇಲೆ ವಾಗ್ದಾಳಿ ನಡೆಸಿದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಬಾಬು ಜಗಜೀವನ್ ರಾಮ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುನ್ನ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ಕೆಲವರು ರಾಮಸೇನೆ, ಮತ್ಯಾವುದೋ ಸೇನೆ ಅಂತ ಹೆಸರು ಇಟ್ಟಕೊಂಡಿದ್ದಾರೆ. ರಾಮನ ಹೆಸರಿಟ್ಟುಕೊಂಡು ಹಿಂಸೆಯನ್ನು ಪ್ರಚೋದಿಸುತ್ತಿದ್ದಾರೆ. ಅಂಥವರು ರಾವಣಸೇನೆ ಎಂದು ಹೆಸರಿಟ್ಟುಕೊಂಡರೆ ಉತ್ತಮ. ಇವರು ರಾಮನ ಹೆಸರಿಗೆ ಯಾಕೆ ಕಳಂಕ ತರುತ್ತಿದ್ದಾರೆ. ದಯಮಾಡಿ ಮರ್ಯಾದಾ ಪುರುಷೋತ್ತಮನ ಹೆಸರಿಗೆ ಕಳಂಕ ತರಬೇಡಿ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

Edited By : Nagaraj Tulugeri
PublicNext

PublicNext

05/04/2022 04:28 pm

Cinque Terre

46.65 K

Cinque Terre

5

ಸಂಬಂಧಿತ ಸುದ್ದಿ