ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಈಶ್ವರಪ್ಪ ಒಬ್ಬ ದೇಶದ್ರೋಹಿ, ಅವರ ಮಾತಿಗೆ ನಾನು ಪ್ರತಿಕ್ರಿಯೆ ನೀಡಲ್ಲ: ಡಿಕೆಶಿ ಕಿಡಿ

ಚಿತ್ರದುರ್ಗ: ಬಿಜೆಪಿ ನಾಯಕರು ದೇಶದಲ್ಲಿ ಅಶಾಂತಿ ಮೂಡಿಸಲು ಟ್ರ್ಯಾಪ್ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ಚಿತ್ರದುರ್ಗ ಜಿಲ್ಲೆ ಹಿರಿಯೂರು ಪಟ್ಟಣದಲ್ಲಿ ಮಾತಾನಾಡಿದ ಅವರು, ಹಿಜಾಬ್ ಬಗ್ಗೆ ನಾಯಕರಿಗೆ ಕೊಟ್ಟ ಸೂಚನೆಗೆ ಗೃಹ ಸಚಿವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು. ಭಾವನಾತ್ಮಕವಾಗಿ ವಿಚಾರಗಳ ಬಗ್ಗೆ ಮಾತಾಡದಂತೆ ಸೂಚಿಸಿದ್ದೇನೆ. ಯಾರು ಮಾತಾಡಬೇಕು ಅವರೇ ಮಾತಾಡಬೇಕು. ಎಲ್ಲರೂ ಪ್ರತಿಕ್ರಿಯಿಸಬಾರದೆಂದು ಸೂಚನೆ ನೀಡಿದ್ದು ನಿಜ ಎಂದು ಸ್ಪಷ್ಟನೆ ನೀಡಿದರು.

ನಾವು ಯಾವ ಸಿಂಹಾಸನ ಇಟ್ಟುಕೊಂಡಿಲ್ಲ, ಪ್ರಜಾಪ್ರಭುತ್ವ ಪಾಲಿಸುತ್ತೇವೆ. ಕಾಂಗ್ರೆಸ್ ಪಕ್ಷದ ಜವಬ್ದಾರಿ ಸ್ಥಾನ ನಿರ್ವಹಿಸುತ್ತಿದ್ದೇವೆ ಎಂದರು. ಮುಸ್ಲಿಮರನ್ನು ಓಲೈಸಲು ಡಿಕೆಶಿ ಸಂವಿಧಾನ ಮೀರಿ ಮಾತನಾಡ್ತಿದ್ದಾರೆಂಬ ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಅವರು, ಈಶ್ವರಪ್ಪ ದೇಶದ್ರೋಹಿ, ರಾಷ್ಟ್ರಧ್ವಜ ದ್ರೋಹಿ, ಸಂವಿಧಾನ ದ್ರೋಹಿ ಅವರಿಗೆಲ್ಲಾ ನಾನು ಪ್ರತಿಕ್ರಿಯಿಸಲ್ಲ. ಸಿಎಂ ಮಾತಿಗೆ ಉತ್ತರ ಕೊಡಬಹುದು, ರಸ್ತೇಲಿ ಹೋಗೋರಿಗೆಲ್ಲ ಉತ್ತರಿಸಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

Edited By : Nagaraj Tulugeri
PublicNext

PublicNext

05/04/2022 06:25 pm

Cinque Terre

93.26 K

Cinque Terre

16

ಸಂಬಂಧಿತ ಸುದ್ದಿ