ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಡಗು-ಉಡುಪಿ ಸೇರಿ 7 ಜಿಲ್ಲೆಯ 95 ಕೋಟಿ ರೂ.ಕ್ರಿಯಾ ಯೋಜನೆಗೆ ಗ್ರೀನ್ ಸಿಗ್ನಲ್ !

ಬೆಂಗಳೂರು: ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯಡಿ 709 ಕೋಟಿ ರೂ.ಮೊತ್ತದ ಕ್ರಿಯಾ ಯೋಜನೆಗೆ ಅನುಮೋದನೆ ಸಿಕ್ಕಿದೆ.

ಈ ಯೋಜನೆ ಅಡಿಯಲ್ಲಿಯೇ ಕೊಡಗು ಮತ್ತು ಉಡುಪಿ ಸೇರಿ ಒಟ್ಟು 7 ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಮೂಲ ಸೌಕರ್ಯಗಳ ಅಭಿವೃದ್ಧಿಗೆ 95 ಕೋಟಿ ರೂಪಾಯಿ ಕ್ರಿಯಾ ಯೋಜನೆಗೆ ಈಗ ಅನುಮೋದನೆ ಸಿಕ್ಕಿದೆ.

ವಿಧಾನಸೌಧದಲ್ಲಿ ಪೌರಾಡಳಿತ ಸಚಿವ ಎಂ.ಟಿ.ಬಿ ನಾಗರಾಜ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ವಿಚಾರದ ಬಗ್ಗೆ ಸ್ವತಃ ಎಂ.ಟಿ.ಬಿ.ನಾಗರಾಜ್ ಹೇಳಿಕೊಂಡಿದ್ದಾರೆ.

ಉಡುಪಿ,ಕೊಡಗು,ಮೈಸೂರು,ಬಳ್ಳಾರಿ,ದಾವಣಗೆರೆ, ಬೆಳಗಾವಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕೈಗೊಳ್ಳುವ 2022-2023 ರಿಂದ 2024-2025 ಕಾಮಗಾರಿಗೆ ಮುಖ್ಯಮಂತ್ರಿ ಅಮೃತ ನಗರೋತ್ಥಾನ ನಾಲ್ಕನೆ ಹಂತದ ಯೋಜನೆಗೆ ಒಪ್ಪಿಗೆ ನೀಡಲಾಗಿದೆ.

Edited By :
PublicNext

PublicNext

07/04/2022 01:44 pm

Cinque Terre

48.21 K

Cinque Terre

0

ಸಂಬಂಧಿತ ಸುದ್ದಿ