ಮಂಡ್ಯ: ಕರ್ನಾಟಕದಲ್ಲಿ ಶುರುವಾಗಿದ್ದ ಹಿಜಾಬ್ ವಿವಾದ ಇಡೀ ದೇಶಕ್ಕೆ ವ್ಯಾಪಿಸಿ ಸದ್ಯ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಬಗ್ಗೆ ಅಲ್‌ಕೈದಾ ಉಗ್ರಗಾಮಿ ಸಂಘಟನೆ ಮುಖ್ಯಸ್ಥ ಆಯ್ಮಾನ್ ಅಲ್ ಝವಾಹಿರಿ ಹೇಳಿಕೆ ನೀಡಿದ್ದಾನೆ.
ಈ ಬಗ್ಗೆ ಮಾತನಾಡಿರುವ ಸಚಿವ ಅಶ್ವತ್ಥನಾರಾಯಣ, ಅಲ್ ಝವಾಹಿರಿ ಹೇಳಿಕೆಯನ್ನು ಭಾರತದ ಅಲ್ಪಸಂಖ್ಯಾತರು ಖಂಡಿಸಬೇಕಿತ್ತು. ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಕೂಡ ಈ ಬೆಳವಣಿಗೆ ಬಗ್ಗೆ ಮಾತನಾಡುತ್ತಿಲ್ಲ. ಕಾಂಗ್ರೆಸ್ ನಾಯಕರು ಅಲ್ಪಸಂಖ್ಯಾತರ ಓಲೈಕೆಯಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದ್ದಾರೆ.
ಸಿದ್ದರಾಮಯ್ಯ ಸಂಪೂರ್ಣವಾಗಿ ಗೊಂದಲದಲ್ಲಿ ಮುಳುಗಿದ್ದಾರೆ. ಸಮವಸ್ತ್ರ ಬೇಕೋ, ಬೇಡವೋ ಎಂಬ ಬಗ್ಗೆ ಅವರಿಗೆ ಸ್ಪಷ್ಟ ನಿಲುವುಗಳಿಲ್ಲ, ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ’ ಅಲ್ಪಸಂಖ್ಯಾತರ ವೋಟಿಗಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ಎರಡೂ ಪಕ್ಷಗಳು ಪೈಪೋಟಿ ನಡೆಸಿವೆ. ಧರ್ಮಕ್ಕಿಂತ ಮಿಗಿಲಾಗಿ ನಾವು ಭಾರತೀಯರು. ದ್ವೇಷ, ವೈಮನಸ್ಸು ಬೆಳೆಸುವವರಿಗೆ ಪೂರಕವಾಗಿ ಅಲ್ಪಸಂಖ್ಯಾತರು ಇರಬಾರದು. ನಮ್ಮ ದೇಶ, ರಾಜ್ಯದ ಬಗ್ಗೆ ಮಾತನಾಡಿರುವ ಅಲ್‌ಕೈದಾ ಹೇಳಿಕೆಯನ್ನು ತೀವ್ರವಾಗಿ ಖಂಡಿಸಬೇಕು ಎಂದು ಅಶ್ವತ್ಥನಾರಾಯಣ ಹೇಳಿದ್ದಾರೆ.
PublicNext
07/04/2022 07:51 pm