ಬೆಂಗಳೂರು: ರಾಜ್ಯ ಸರ್ಕಾರವು ಯಾವುದೇ ಧರ್ಮದ ಭಾವೈಕ್ಯತೆಗೆ ಧಕ್ಕೆ ತರುವ ಕೆಲಸವನ್ನು ಮಾಡಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರವು ಪ್ರತಿಯೊಂದು ಧರ್ಮವನ್ನೂ ಸಮಾನವಾಗಿ ಕಾಣುತ್ತಿದೆ. ಯಾರೊಬ್ಬರು ಕೂಡ ಮೇಲೂ ಅಲ್ಲ, ಕೀಳೂ ಅಲ್ಲ, ಅವರವರ ಧರ್ಮ ಮತ್ತು ಆಚರಣೆಗೆ ಕಾನೂನಿನಲ್ಲಿ ಅವಕಾಶವಿದೆ. ಭಾವೈಕ್ಯತೆಗೆ ಧಕ್ಕೆ ತರುವ ಕೆಲಸವನ್ನು ಮಾಡುವುದಿಲ್ಲ ಎಂದು ಹೇಳಿದರು.
ಇನ್ನು ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್ ಮುಗ್ಧ ಹುಡುಗಿ. ದುರದೃಷ್ಟವಶಾತ್ ಮುಸ್ಕಾನ್ ಯಾಕೆ ಈ ರೀತಿ ಹೇಳಿಕೆ ಕೊಟ್ಟಳು ಎನ್ನುವುದು ಗೊತ್ತಿಲ್ಲ. ಆದರೆ, ಜನರ ಮುಗ್ಧತೆಯನ್ನು ಅಸ್ತ್ರವನ್ನಾಗಿ ಅಲ್ ಖೈದಾ ಭಯೋತ್ಪಾದಕರು ಬಳಸುತ್ತಾರೆ. ಇಂತಹ ಭಯೋತ್ಪಾದಕ ಸಂಘಟನೆಗಳಿಂದ ಹೆಚ್ಚು ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
PublicNext
08/04/2022 03:25 pm