ಬೆಂಗಳೂರು : ದೇಶದಲ್ಲಿಯ ಬಿಜೆಪಿ ಆಡಳಿತ ಥೇಟ್ ಬ್ರಿಟಿಷರ ಆಡಳಿತದಂತಿದೆ. ಬ್ರಿಟಿಷರಂತೆಯೇ ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದ್ದಾರೆ ಎಂದು ಹೆಚ್ ಡಿಕೆ ಆರೋಪಿಸಿದ್ದಾರೆ.
ಗೃಹ ಸಚಿವ ಅಮಿತ್ ಶಾ ಅವರು ಸಂಸದೀಯ ಅಧಿಕೃತ ಭಾಷಾ ಸಮಿತಿಯ 37ನೇ ಸಭೆಯಲ್ಲಿ ಮಾತನಾಡಿ, ಇಂಗ್ಲಿಷ್ ಗೆ ಪರ್ಯಾಯವಾಗಿ ದೇಶದಲ್ಲಿ ಹಿಂದಿ ಬಳಕೆಯಾಗಬೇಕು ಎಂದು ಹೇಳಿದ್ದರು. ಈ ಕುರಿತು ಹೆಚ್ ಡಿಕೆ ಟ್ವೀಟ್ ಮಾಡಿ ವಾಗ್ದಾಳಿ ನಡೆಸಿದರು.
ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿಕೊಂಡು ಕಳೆದ 75 ವರ್ಷಗಳಿಂದ ಒಂದೇ ತಾಯಿಯ ಮಕ್ಕಳಂತೆ ಇರುವ ರಾಜ್ಯಗಳ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹುಳಿ ಹಿಂಡಿ, ಹಿಂದಿ ಹೇರಿಕೆ ಬಗ್ಗೆ ಹೇಳಿಕೆ ನೀಡುತ್ತಿರುವುದು ಆಘಾತಕಾರಿ ಎಂದಿದ್ದಾರೆ.
ಮುಂದುವರೆದು ಹೆಚ್ ಡಿಕೆ ಮಾಡಿರುವ ಟ್ವೀಟ್ ಇಲ್ಲಿವೆ ನೋಡಿ.
PublicNext
09/04/2022 03:17 pm