ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗೃಹ ಸಚಿವ ಅರಗ ಜ್ಞಾನೇಂದ್ರ, ಸಿ.ಟಿ.ರವಿ ವಿರುದ್ಧ ಪೊಲೀಸ್ ಆಯುಕ್ತರಿಗೆ ಶಾಸಕಿ ಅಂಜಲಿ ನಿಂಬಾಳ್ಕರ್ ದೂರು

ಬೆಳಗಾವಿ: ಬೆಳಗಾವಿಯ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬಳಿಕ ಬೆಳಗಾವಿ ನಗರ ಪೊಲೀಸ್ ಆಯುಕ್ತರ ಕಚೇರಿಗೆ ತೆರಳಿದ ಶಾಸಕಿ ಅಂಜಲಿ ನಿಂಬಾಳ್ಕರ್ ನೇತೃತ್ವದ ನಿಯೋಗ ಗೃಹ ಸಚಿವ ಅರಗ ಜ್ಞಾನೇಂದ್ರ, ಸಿ‌.ಟಿ.ರವಿ ವಿರುದ್ಧ ಬೆಳಗಾವಿ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದರು.

ಬೆಂಗಳೂರಿನ ಜೆ.ಜೆ.ನಗರ ಠಾಣಾ ವ್ಯಾಪ್ತಿಯಲ್ಲಿ ಚಂದ್ರು‌ ಹತ್ಯೆ ಪ್ರಕರಣ ಸಂಬಂಧ ರಾಜ್ಯದಲ್ಲಿ ಅಶಾಂತಿ ನಿರ್ಮಿಸಲು ಪ್ರಚೋದನಾಕಾರಿ ಹೇಳಿಕೆ ನೀಡುತ್ತಿದ್ದಾರೆ. ಕೋಮು‌ ಗಲಭೆಗೆ ಪ್ರಚೋದನೆ ನೀಡುವ ಹೇಳಿಕೆ ವಿರುದ್ಧ ಕಾನೂನು ಕ್ರಮ ಜರುಗಿಸಲು ಬೆಳಗಾವಿ ನಗರ ಪೊಲೀಸ್ ಆಯುಕ್ತರಿಗೆ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ನೇತೃತ್ವದ ಕಾಂಗ್ರೆಸ್ ನಿಯೋಗ ಮನವಿ ಮಾಡಿದೆ‌.

ಗೃಹಸಚಿವ ಅರಗ ಜ್ಞಾನೇಂದ್ರ ಆರ್‌ಎಸ್ಎಸ್ ಏಜೆಂಟ್. ಎಂದು ಶಾಸಕಿ ಅಂಜಲಿ ನಿಂಬಾಳ್ಕರ್ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ದಲಿತ ಯುವಕ ಚಂದ್ರು‌ ಕೊಲೆ ಪ್ರಕರಣ ಕುರಿತು ಅರಗ ಜ್ಞಾನೇಂದ್ರ ಹೇಳಿಕೆ ಖಂಡನೀಯವಾಗಿದ್ದು ಘಟನೆಯ ಬಗ್ಗೆ ಬೆಳಗ್ಗೆ ಬೆಂಗಳೂರು ಕಮಿಷನರ್ ಟ್ವೀಟ್ ಮಾಡಿದ್ದರು. ಬಳಿಕ ಗೃಹ ಸಚಿವರು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ‌ ರಾಜ್ಯದಲ್ಲಿ ಶಾಂತಿ ಕದಡಲು ಗೃಹ ಸಚಿವರು ಯತ್ನಿಸುತ್ತಿದ್ದಾರೆ. ರಾಜ್ಯದಲ್ಲಿ ಶಾಂತಿ ನೆಲಸಲು ಗೃಹಸಚಿವರ ರಾಜೀನಾಮೆ ಪಡೆಯಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿಗೆ ಶಾಸಕಿ ಅಂಜಲಿ ನಿಂಬಾಳ್ಕರ್ ಒತ್ತಾಯಿಸಿದ್ದಾರೆ.‌ ಮೂರು ವರ್ಷದಿಂದ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಆಗಿಲ್ಲ. ಮುಂದಿನ ವರ್ಷ ಚುನಾವಣೆ ಇದೆ. ಧರ್ಮಗಳ ಆಧರಿಸಿ ಚುನಾವಣೆ ಎದುರಿಸಲು ಬಿಜೆಪಿ ಮುಂದಾಗಿದೆ' ಎಂದು ಅಂಜಲಿ ನಿಂಬಾಳ್ಕರ್ ಆರೋಪಿಸಿದ್ದಾರೆ.

Edited By : Vijay Kumar
PublicNext

PublicNext

09/04/2022 07:11 pm

Cinque Terre

127.37 K

Cinque Terre

9

ಸಂಬಂಧಿತ ಸುದ್ದಿ