ದಾವಣಗೆರೆ: ದಾವಣಗೆರೆ ನಗರಾಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯಲ್ಲಿನ ಅಭಿವೃದ್ಧಿ ಕಾಮಗಾರಿಗಳಿಗೆ ಚುರುಕು ನೀಡಲಾಗುವುದು. ಹಿರಿಯರ ಸಲಹೆ, ಮಾರ್ಗದರ್ಶನ ಪಡೆದು ಉತ್ತಮ ಕೆಲಸ ಮಾಡುತ್ತೇನೆ ಎಂದು ದಾವಣಗೆರೆ- ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷ ಕೆ. ಎಂ ಸುರೇಶ್ ಹೇಳಿದರು.
ದೂಡಾದಲ್ಲಿ ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಈ ಹಿಂದಿನ ಅಧ್ಯಕ್ಷರು ಮಾಡಿರುವ ಕಾರ್ಯಗಳನ್ನೇ ಮುಂದುವರಿಸಿಕೊಂಡು ಹೋಗುತ್ತೇನೆ. ಯಾವೆಲ್ಲ ಕಾಮಗಾರಿಗಳು ಉಳಿದಿವೆಯೋ ಅವುಗಳನ್ನ ಪೂರ್ಣಗೊಳಿಸಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ ಎಂದು ಹೇಳಿದರು.
22 ವರ್ಷಗಳಿಂದಲೂ ಬಿಜೆಪಿಗಾಗಿ ದುಡಿಯುತ್ತಿದ್ದೇನೆ. ನನ್ನನ್ನು ಗುರುತಿಸಿ ಹುದ್ದೆ ನೀಡಿರುವುದು ಖುಷಿ ತಂದಿದೆ. 2000ರಲ್ಲಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿ ಕೆಲಸ ಮಾಡಿದ್ದೇನೆ. ಪಕ್ಷದಲ್ಲಿ ಹಿರಿಯರು, ಸಂಸದ ಜಿ.ಎಂ ಸಿದ್ದೇಶ್ವರ್, ಶಾಸಕ ಎಸ್.ಎ ರವೀಂದ್ರನಾಥ್, ಜಿಲ್ಲಾ ಬಿಜೆಪಿ ಘಟಕ, ಕಾರ್ಯಕರ್ತರು, ಅಭಿಮಾನಿಗಳ ಆಶೀರ್ವಾದದಿಂದ ಈ ಅಧ್ಯಕ್ಷ ಸ್ಥಾನ ಸಿಕ್ಕಿದೆ. ಜನಸ್ನೇಹಿ ಆಡಳಿತ ನೀಡಲು ಪ್ರಯತ್ನಿಸುತ್ತೇನೆ. ಜನರು ದೂಡಾಕ್ಕೆ ಅಲೆದಾಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತೇನೆ ಎಂದು ತಿಳಿಸಿದರು.
PublicNext
11/04/2022 06:18 pm