ಕೋಲಾರ : ಅಂಬೇಡ್ಕರ್ ಜಯಂತಿ ಪೂರ್ವಭಾವಿ ಸಭೆಯಲ್ಲಿ ಹೊಡೆದಾಟ ನಡೆದ ಘಟನೆ ಕೋಲಾರ ತಾಲ್ಲೂಕಿನ ಶಾಪೂರು ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ.
ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನೇತೃತ್ವದಲ್ಲಿ ಕರೆದಿದ್ದ ಈ ಪೂರ್ವಭಾವಿ ಸಭೆಯಲ್ಲಿ ಗ್ರಾ.ಪಂ ಸದಸ್ಯರು ಸೇರಿದಂತೆ ಇನ್ನಿತರ ಮುಖಂಡರು ಭಾಗಿಯಾಗಿದ್ದರು. ಈ ವೇಳೆ ಕ್ಷುಲ್ಲಕ ಕಾರಣಕ್ಕೆ ಶುರುವಾದ ವಾಗ್ವಾದ ಮುಂದೆ ಕುರ್ಚಿಗಳಿಂದ ಹೊಡೆದಾಡಿಕೊಳ್ಳುವ ಹಂತ ತಲುಪಿದೆ.
ಘಟನೆಯಲ್ಲಿ ಸದಸ್ಯರಾದ ಚಂದ್ರಶೇಖರ್, ಗೋಪಾಲ್ ಮತ್ತು ಚಲಪತಿ ಹೊಡೆದಾಡಿಕೊಂಡವರು. ಇನ್ನು ಗಲಾಟೆಯನ್ನು ವಿಡಿಯೋ ಮಾಡುತ್ತಿದ್ದವರ ಮೇಲೂ ಹಲ್ಲೆ ಮಾಡಲಾಗಿದೆ.- ಗ್ರಾಮ ಪಂಚಾಯಿತಿ ಸದಸ್ಯ ಹೊಲ್ಲಂಬಳ್ಳಿ ಚಲಪತಿಯಿಂದ ಹಲ್ಲೆ ನಡೆದಿದೆ ಎನ್ನಲಾಗಿದೆ.
PublicNext
12/04/2022 08:15 am