ಮೈಸೂರು: ಉಡುಪಿ ಲಾಡ್ಜ್‌ನಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಎಸ್ ಈಶ್ವರಪ್ಪ ಹೆಸರು ಕೇಳಿಬರುತ್ತಿದ್ದಂತೆಯೇ ಬಿಜೆಪಿ ಹೈಕಮಾಂಡ್ ಗರಂ ಆಗಿದ್ದು, ರಾಜೀನಾಮೆ ನೀಡುವಂತೆ ಸೂಚನೆ ನೀಡಿದೆ.
ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಕೆ.ಎಸ್. ಈಶ್ವರಪ್ಪ ಅವರು ಇಂದು ಮಧ್ಯಾಹ್ನ 1 ಗಂಟೆಗೆ ಶಿವಮೊಗ್ಗದಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಈ ವೇಳೆಯೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸದ್ಯ ಮೈಸೂರು ಪ್ರವಾಸ ಮೊಟಕುಗೊಳಿಸಿರುವ ಸಚಿವ ಕೆ.ಎಸ್ ಈಶ್ವರಪ್ಪ ಶಿವಮೊಗ್ಗಕ್ಕೆ ಹೊರಟಿದ್ದಾರೆ. ತಮ್ಮ ಸ್ವಕ್ಷೇತ್ರ ಶಿವಮೊಗ್ಗಕ್ಕೆ ಇಂದು ಮಧ್ಯಾಹ್ನ 1 ಗಂಟೆಗೆ ಶಿವಮೊಗ್ಗದಲ್ಲಿ ಮಹತ್ವದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
PublicNext
13/04/2022 11:56 am