ಬೆಳಗಾವಿ: ಆತ್ಮಹತ್ಯೆ ಮಾಡಿಕೊಂಡಿರುವ ಸಂತೋಷ್ ಪಾಟೀಲ್ ನಿವಾಸಕ್ಕೆ ಕಾಂಗ್ರೆಸ್ ನಾಯಕರ ಭೇಟಿ. ಬೆಳಗಾವಿ ಏ13 ಕಮಿಷನ್ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಂತೋಷ್ ಕೆ ಪಾಟೀಲ್ ಅವರ ಬೆಳಗಾವಿ ಹಿಂಡಲಗಾ ನಿವಾಸಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತಿತರರು ಬುಧವಾರ ಸಂಜೆ ಭೇಟಿ ಕೊಟ್ಟು, ಕುಟುಂಬ ಸದಸ್ಯರಿಗೆ ಸಾಂತ್ವನ, ಧೈರ್ಯ ಹೇಳಿದರು.
PublicNext
13/04/2022 10:01 pm