ಶಿವಮೊಗ್ಗ: ನಾಳೆ ಶುಕ್ರವಾರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡೋದಾಗಿ ಕೆ.ಎಸ್ ಈಶ್ವರಪ್ಪ ಘೋಷಿಸಿದ್ದಾರೆ. ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ತಮ್ಮ ನಿರ್ಧಾರ ಪ್ರಕಟಿಸಿದ್ದಾರೆ.
ಢಿಡೀರ್ ಪತ್ರಿಕಾಗೋಷ್ಠಿ ನಡೆಸಿದ ಈಶ್ವರಪ್ಪ ಸಿಎಂ ಬೊಮ್ಮಾಯಿ ಹಾಗೂ ಯಡಿಯೂರಪ್ಪ ಅವರಿಗೆ ಮತ್ತು ಎಲ್ಲ ಸ್ನೇಹಿತರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನನಗೆ ಪೂರ್ಣ ವಿಶ್ವಾಸ ಇದೆ. ದೇವರ ಮೇಲೆ ನಂಬಿಕೆ ಇದೆ. ನಾನು ಎಲ್ಲವನ್ನೂ ಎದುರಿಸಿ ಆರೋಪ ಮುಕ್ತನಾಗಿ ಬರುತ್ತೇನೆ. ಪಕ್ಷಕ್ಕೆ ಮುಜುಗರ ಉಂಟು ಮಾಡುವ ಉದ್ದೇಶ ಇಲ್ಲ. ನನ್ನದು ಒಂದೇ ಒಂದು ಪರ್ಸೆಂಟ್ ತಪ್ಪಿದ್ದರೆ ಅದು ಸಾಬೀತಾಗಲಿ. ಎಲ್ಲ ಕಾರ್ಯಕರ್ತರಿಗೆ ಧನ್ಯವಾದ ಸಲ್ಲಿಸುತ್ತೇನೆ. ಕೆಲಸ ಮಾಡಲು ಗ್ರಾಮೀಣಾಭಿವೃದ್ಧಿಯಂತಹ ಉತ್ತಮ ಇಲಾಖೆ ನನಗೆ ಸಿಕ್ಕಿತ್ತು. ನಾಳೆ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದೇನೆ ಎಂದು ಈಶ್ವರಪ್ಪ ಹೇಳಿದ್ದಾರೆ.
PublicNext
14/04/2022 06:33 pm