ಚಂಡೀಗಡ: ಪಂಜಾಬ್ ಸರ್ಕಾರ ರಿಮೋಟ್ ಕಂಟ್ರೋಲ್ ಮೂಲಕ ನಡೆಯುತ್ತಿದೆ ಎಂಬ ಆರೋಪವನ್ನು ತಳ್ಳಿ ಹಾಕಿರುವ ಸಿಎಂ ಭಗವಂತ್ ಮಾನ್ ಪಂಜಾಬ್ ಅಧಿಕಾರಿಗಳೊಂದಿಗೆ ಚರ್ಚಿಸಿ ತಮ್ಮ ದೆಹಲಿ ಸಿಎಂ ಸಂವಾದ ನಡೆಸಿದ್ದನ್ನು ಸಮರ್ಥಿಸಿಕೊಂಡಿದ್ದಾರೆ.
ದೆಹಲಿಯ ಅಭಿವೃದ್ಧಿ ಮಾದರಿ ಹಾಗೂ ಅಲ್ಲಿನ ಅಧಿಕಾರಿಗಳ ಕಾರ್ಯ ವೈಖರಿಯನ್ನು ಅರಿತುಕೊಳ್ಳಲು ಪಂಜಾಬ್ ಅಧಿಕಾರಿಗಳನ್ನು ದೆಹಲಿಗೆ ಕಳುಹಿಸಿದ್ದೇನೆ. ಹೊರತಾಗಿ ಇದರಲ್ಲಿ ಬೇರೆ ಯಾವ ಉದ್ದೇಶವೂ ಇಲ್ಲ ಎಂದು ಭಗವಂತ್ ಮಾನ್ ಸ್ಪಷ್ಟವಾಗಿ ಹೇಳಿದ್ದಾರೆ.
ಭಗವಂತ್ ಮಾನ್ ಅವರ ಈ ನಡೆಯನ್ನು ಖಂಡಿಸಿರುವ ವಿಪಕ್ಷಗಳು ಇದು ರಾಜ್ಯದ ವ್ಯವಹಾರಗಳಲ್ಲಿ ಹಸ್ತಕ್ಷೇಪ ಹಾಗೂ ಒಕ್ಕೂಟದ ಉಲ್ಲಂಘನೆ ಎಂದು ಆಕ್ರೋಶ ವ್ಯಕ್ತಪಡಿಸಿವೆ.
PublicNext
14/04/2022 09:49 pm