ಹಾಸನ: ಏಪ್ರಿಲ್ 17ರಂದು ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಲಿದ್ದೇನೆ. ಅಂದು ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಸಿ.ಎಂ ಇಬ್ರಾಹಿಂ ಅವರು ಪ್ರಮಾಣ ಸ್ವೀಕರಿಸಲಿದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಹಾಸನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿದ್ದೇನೆ. ಪಕ್ಷದ ಸಂಘಟನೆ ದೃಷ್ಟಿಯಿಂದ ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಮಾಡಲಾಗುತ್ತಿದೆ ಎಂದರು.
ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಸಚಿವ ಈಶ್ವರಪ್ಪ ಅವರ ಮೇಲೆ ಭ್ರಷ್ಟಚಾರದ ಆರೋಪ ಕೇಳಿ ಬಂದಿದೆ. ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ದೂರು ದಾಖಲಾಗಿದೆ. ಈಶ್ವರಪ್ಪ ಪ್ರಕರಣದಲ್ಲಿ ನಿರ್ದೋಷಿ ಎಂದು ಸಾಬೀತಾದರೆ ಪುನ: ಮಂತ್ರಿ ಮಂಡಲದಲ್ಲಿ ಸ್ಥಾನ ಪಡೆಯಲಿ. ದೇಶದಲ್ಲಿ ಎಲ್ಲ ಧರ್ಮದವರು ಬದುಕುವ ಹಕ್ಕನ್ನು ಪಡೆದಿದ್ದಾರೆ. ಆದರೆ ಕೆಲವು ಕಿಡಿಗೇಡಿಗಳು ಹಿಂದೂ, ಮುಸ್ಲಿಮರ ನಡುವೆ ಸಾಮರಸ್ಯವನ್ನು ಕದಡುವ ಕೆಲಸ ಮಾಡುತ್ತಿರುವುದು ಸರಿಯಲ್ಲ ಎಂದು ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು.
PublicNext
14/04/2022 10:12 pm