ಬೆಂಗಳೂರು: ಗುತ್ತಿದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಈರಶ್ವರಪ್ಪನವರೇ ಏ 1 ಆರೋಪಿಯಾಗಿದ್ದು ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಸಾಲು ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಅಹೋರಾತ್ರಿ ಧರಣಿ ಕೈಗೊಂಡಿದೆ.ಈಶ್ವರಪ್ಪ ವಿರುದ್ಧ ಹೊಸದಾಗಿ ಎಫ್ ಐಆರ್ ಹಾಕಬೇಕು. ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು, ಹೈಕೋರ್ಟ್ ನ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆ ಮಾಡಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.
ರಾಜೀನಾಮೆ ಕೊಟ್ಟ ಕೂಡಲೇ ಹಿಂದೆ ಸರಿದರೆ ಪ್ರಕರಣ ತಾರ್ಕಿಕ ಅಂತ್ಯಕ್ಕೆ ಹೋಗಲ್ಲ. ಆದ್ದರಿಂದ ಹೋರಾಟ ಮುಂದುವರಿಸುವುದು ಕೈ ಪಾಳಯದ ಲೆಕ್ಕಾಚಾರವಾಗಿದೆ. ರಾಜ್ಯದ ಉದ್ದಗಲಕ್ಕೂ ಈ ಸಂಬಂಧ ಹೋರಾಟ ನಡೆಸಲು ಕೈ ಪಾಳಯದ ನಿರ್ಧಾರ ಮಾಡಿದೆ. ಈಶ್ವರಪ್ಪ ಬಂಧಿಸುವವರೆಗೆ ಹೋರಾಟ ಮುಂದುವರಿಸಲು ತೀರ್ಮಾನಿಸಿದೆ.
PublicNext
15/04/2022 09:03 am