ಚಿಕ್ಕಬಳ್ಳಾಪುರ: ಬಾಗೇಪಲ್ಲಿ ಕ್ಷೇತ್ರದ ಮಾಜಿ ಶಾಸಕ, ಸಾಮಾಜಿಕ ಹೋರಾಟಗಾರ ಜಿ.ವಿ ಶ್ರೀರಾಮರೆಡ್ಡಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸಿಪಿಐ(ಎಂ) ಪಕ್ಷದಿಂದ ಅವರು 1999 ಹಾಗೂ 2004ರಲ್ಲಿ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಉತ್ತಮ ಸಂಸದೀಯ ಪಟು ಎನಿಸಿಕೊಂಡಿದ್ದ ಅವರು ಸದನದಲ್ಲಿ ಮಾತನಾಡುವಾಗ ಇಡೀ ರಾಜ್ಯವನ್ನು ಪ್ರತಿನಿಧಿಸುತ್ತಿದ್ದರು.
ಅಧಿವೇಶನದಲ್ಲಿ ಕೇವಲ ತನ್ನ ಕ್ಷೇತ್ರವಲ್ಲದೆ ಇಡೀ ರಾಜ್ಯವನ್ನು ಪ್ರತಿನಿಧಿಸಿ ಮಾತನಾಡುತ್ತಿದ್ದ ಶ್ರೀರಾಮರೆಡ್ಡಿಯವರ ವಿದ್ವತ್ತು, ಜನಪರ ಕಾಳಜಿ, ರಾಜ್ಯದ ಬಗೆಗಿನ ಮಾಹಿತಿಗೆ ಇಡೀ ಸದನ ತಲೆದೂಗುತ್ತಿತ್ತು. ಶ್ರೀರಾಮ ರೆಡ್ಡಿಯವರು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಮಾಜಿ ಸಿಎಂ ಹಾಲಿ ವಿಪಕ್ಷ ನಾಯಕ ಸಿದ್ದರಾಮಯ್ಯರ ಆಪ್ತರಾಗಿದ್ದರು.
PublicNext
15/04/2022 12:12 pm