ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾವಣಗೆರೆ: “ಈಶ್ವರಪ್ಪ ಆರೋಪ ಮುಕ್ತರಾಗಿ ಮತ್ತೆ ಸಚಿವರಾಗ್ತಾರೆ”: ಬಿ.ಎಸ್.ಯಡಿಯೂರಪ್ಪ ವಿಶ್ವಾಸ

ದಾವಣಗೆರೆ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಕೆ. ಎಸ್. ಈಶ್ವರಪ್ಪ ಆರೋಪ ಮುಕ್ತರಾಗಿ ಬರುತ್ತಾರೆ. ಏನೂ ಅಪರಾಧ ಮಾಡಿಲ್ಲ. ಆರೋಪ ಮುಕ್ತರಾಗಿ ಮತ್ತೆ ಸಚಿವರಾಗುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.ಹೊನ್ನಾಳಿ ಪಟ್ಟಣದ ಶಾಸಕ ಎಂ‌. ಪಿ. ರೇಣುಕಾಚಾರ್ಯ ಅವರ ನಿವಾಸದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಯಾರೋ ಮಾಡಿದ ಅಪರಾಧಕ್ಕಾಗಿ ಈಶ್ವರಪ್ಪ ಅವರನ್ನು ಬಲಿಪಶು ಮಾಡಲಾಗಿದೆ. ತನಿಖೆಯ ಬಳಿಕ ಆರೋಪದಿಂದ ಮುಕ್ತರಾಗಿ ಮತ್ತೆ ಸಚಿವ ಸಂಪುಟ ಸೇರಲಿದ್ದಾರೆ‌ ಎಂದು ತಿಳಿಸಿದರು‌.

ಶೇಕಡಾ 40 ರಷ್ಟು ಕಮೀಷನ್ ಪಡೆಯಲಾಗುತ್ತಿದೆ ಎಂಬ ಆರೋಪ ತಳ್ಳಿ ಹಾಕಿದ ಅವರು, ಇಂಥ ಆರೋಪಗಳು ಸುಳ್ಳು. ಆರೋಪ ಮಾಡುವುದು ಕಾಂಗ್ರೆಸ್ ಜಾಯಮಾನ. ಇದರಲ್ಲಿ ಎಳ್ಳಷ್ಟು ಸತ್ಯ ಇಲ್ಲ. ಇದಕ್ಕೆ ಕವಡೆ ಕಾಸಿನ ಕಿಮ್ಮತ್ತು ಇಲ್ಲ. ಈ ಬಗ್ಗೆ ಹೆಚ್ಚು ಚರ್ಚೆ ಬೇಡ ಎಂದರು. ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರ ಪಾತ್ರದ ಬಗ್ಗೆ ಆರೋಪ ಕೇಳಿ ಬರುತ್ತಿರುವ ಕುರಿತಂತೆ ಕೇಳಿದ ಪ್ರಶ್ನೆಗೆ ಕೈವಾಡ ಇದೆಯೋ ಇಲ್ಲವೋ ಗೊತ್ತಿಲ್ಲ.‌ ಸಣ್ಣ ವಿಚಾರವನ್ನು ದೊಡ್ಡದಾಗಿ ಮಾಡಿ ಕಾಂಗ್ರೆಸ್ ನವರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ಈಗ ದಿವಾಳಿಯಾಗಿದೆ‌. ಅದಕ್ಕಾಗಿಯೇ ಇಲ್ಲಸಲ್ಲದ ಆರೋಪ ಮಾಡುತ್ತಿದೆ. ರಾಜಕೀಯ ಲಾಭ ಪಡೆದುಕೊಳ್ಳಲು ಹವಣಿಸುತ್ತಿದೆ ಎಂದು ತಿಳಿಸಿದರು‌.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಪಕ್ಷ ಹೆಚ್ಚಿನ ಸ್ಥಾನ ಪಡೆದು ಅಧಿಕಾರಕ್ಕೆ ಬರಲಿದೆ. ಈ ನಿಟ್ಟಿನಲ್ಲಿ ನಾವು ಪ್ರಯತ್ನ ಮಾಡುತ್ತೇವೆ ಎಂದ ಅವರು, ಬಿ. ವೈ. ವಿಜಯೇಂದ್ರ ಅವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಕೇಂದ್ರದ ವರಿಷ್ಠರು ನಿರ್ಧರಿಸಲಿದ್ದಾರೆ‌ ಎಂದು ತಿಳಿಸಿದರು. ಇನ್ನು ರೇಣುಕಾಚಾರ್ಯ ಅವರಿಗೆ ಸಚಿವ ಸ್ಥಾನ ನೀಡಬಹುದು ಎಂಬ ವಿಶ್ವಾಸ ಇದೆ. ಕೇಂದ್ರ ನಾಯಕರ ಪಟ್ಟಿಯಲ್ಲಿ ಈ ಬಾರಿ ಸೇರ್ಪಡೆಯಾಗಬಹುದು.‌ ಎಂ. ಪಿ. ರೇಣುಕಾಚಾರ್ಯ ಅವರಿಗೆ ಸಚಿವ ಸ್ಥಾನ ನೀಡಲು ಒಪ್ಪಿಗೆ ಸೂಚಿಸಬಹುದು ಎಂದು ಹೇಳಿದರು.

Edited By : Shivu K
PublicNext

PublicNext

15/04/2022 12:19 pm

Cinque Terre

36.87 K

Cinque Terre

7

ಸಂಬಂಧಿತ ಸುದ್ದಿ