ಬೆಂಗಳೂರು: ರಾಜಕೀಯ ಲಾಭಕ್ಕಾಗಿ ಜಾತಿ ಒಡೆದು ಧರ್ಮ ರಾಜಕಾರಣ ಮಾಡುವಾಗ ಎಂ.ಬಿ ಪಾಟೀಲ್ ಅವರಿಗೆ ನೈತಿಕತೆ ನೆನಪಾಗಲಿಲ್ವೇ?
ಈ ರೀತಿ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ ಮಾಜಿ ಸಚಿವ ಎಂ.ಬಿ ಪಾಟೀಲ್ ಹಾಗೂ ಕಾಂಗ್ರೆಸ್ ನಾಯಕರನ್ನು ಪ್ರಶ್ನಿಸಿದೆ.
ಎಂ.ಬಿ ಪಾಟೀಲ್ ಎಂದ ಕೂಡಲೇ ಕಣ್ಣ ಮುಂದೆ ಬರುತ್ತದೆ. ಸಮಾಜಘಾತುಕ ಸಂಘಟನೆಗಳಾದ ಪಿಎಫ್‌ಐ ಹಾಗೂ ಕೆಎಫ್‌ಡಿ ಮೇಲಿನ 1600ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳನ್ನು ನಿಷೇಧ ಮಾಡಿದಾಗ ಎಂ.ಬಿ ಪಾಟೀಲ್ ಅವರೇ ಗೃಹ ಸಚಿವರಾಗಿದ್ದರು. ಆಗ ಕಾಂಗ್ರೆಸ್ಸಿಗರ ನೈತಿಕತೆ ಏನಾಗಿತ್ತು? ಸಮಾಜ ಘಾತುಕರ ವಿರುದ್ಧ ಮೃದು ಧೋರಣೆ ತಾಳಿದ್ದು ನೈತಿಕವೇ? ಎಂದು ಕಾಂಗ್ರೆಸ್ ನಾಯಕರಿಗೆ ಬಿಜೆಪಿ ಪ್ರಶ್ನೆ ಮಾಡಿದೆ.
ಇನ್ನೊಂದು ಟ್ವೀಟ್‌ನಲ್ಲಿ 'ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ತನಿಖೆ ಅತ್ಯಂತ ನಿಷ್ಪಕ್ಷಪಾತವಾಗಿ ನಡೆಯುತ್ತಿದೆ. ಇದಕ್ಕಾಗಿ ಪ್ರತ್ಯೇಕ ತಂಡ ರಚನೆ ಮಾಡಲಾಗಿದೆ. ನೈತಿಕ ಹೊಣೆ ಹೊತ್ತು ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನೂ ನೀಡಿದ್ದಾರೆ. ಆದರೆ ಇಂಥ ನೈತಿಕ ವಿಚಾರಗಳ ಪ್ರಶ್ನೆ ಬಂದಾಗ ಕಾಂಗ್ರೆಸ್ ನಡೆದುಕೊಂಡ ರೀತಿಯನ್ನು ನೆನಪಿಸಬೇಕೇ? ಎಂದು ರಾಜ್ಯ ಬಿಜೆಪಿ ಕಾಂಗ್ರೆಸ್ ಮೇಲೆ ಸಿಡಿದಿದೆ.
PublicNext
15/04/2022 04:25 pm