ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಮಾಧ್ಯಮದ ಎದುರಲ್ಲೇ ರಾಜೀನಾಮೆ ನೀಡಿದ ಈಶ್ವರಪ್ಪ ಹೇಳಿದ್ದೇನು?

ಬೆಂಗಳೂರು: ನಿನ್ನೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾದ ಕೆ.ಎಸ್ ಈಶ್ವರಪ್ಪ ತಮ್ಮ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ನಂತರ ಮಾಧ್ಯಮಗಳ ಎದುರು ರಾಜೀನಾಮೆಯ ಮತ್ತೊಂದು ಪ್ರತಿಯನ್ನು ಸಿಎಂ ಬೊಮ್ಮಾಯಿ ಅವರಿಗೆ ನೀಡಿದ್ದಾರೆ.

ಇದೇ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ನನ್ನ ಮೇಲೆ ಬಂದ ಆರೋಪದಿಂದ ವಿಮುಕ್ತನಾಗಿ ಬರಬೇಕು. ಈ ಆರೋಪದಿಂದ ನನ್ನನ್ನು ಬೆಳೆಸಿದ ಪರಿವಾರಕ್ಕಾಗಲಿ, ಸರ್ಕಾರಕ್ಕಾಗಲಿ ಮುಜುಗರ ಉಂಟಾಗಬಾರದೆಂಬ ಹಿನ್ನೆಲೆಯಲ್ಲಿ ರಾಜೀನಾಮೆಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿದ್ದೇನೆ. ಇದರ ಹಿಂದೆ ಯಾವ ಶಕ್ತಿ ಇದೆ? ಯಾರು ಕುತಂತ್ರ ರಾಜಕಾರಣ ಮಾಡಬೇಕೆಂಬ ಉದ್ದೇಶ ಇಟ್ಟುಕೊಂಡಿದ್ದಾರೆ? ಇದೆಲ್ಲದರ ಬಗ್ಗೆ ತನಿಖೆ ಆಗಬೇಕು ಎಂದು ಮನವಿ ಮಾಡಿದ್ದೇನೆ ಎಂದರು.

ಇನ್ನು ರಾಜೀನಾಮೆ ಸ್ವೀಕರಿಸಿದ ಸಿಎಂ ಬೊಮ್ಮಾಯಿ, ಈ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ. ಮುಂದಿನ ಕ್ರಮಕ್ಕಾಗಿ ರಾಜ್ಯಪಾಲರಿಗೆ ಕಳುಹಿಸುತ್ತೇನೆ ಎಂದಿದ್ದಾರೆ.

Edited By :
PublicNext

PublicNext

16/04/2022 08:21 am

Cinque Terre

73.25 K

Cinque Terre

0

ಸಂಬಂಧಿತ ಸುದ್ದಿ