ಬೆಳಗಾವಿ: ರಾಜ್ಯ ಬಿಜೆಪಿ ಸರ್ಕಾರದಲ್ಲಿ ಹಲಾಲ್ ಮೊದಲ ಸಚಿವ ಕೆ.ಎಸ್. ಈಶ್ವರಪ್ಪ, ಹಲಾಲ್ ಆಗಲು ಇನ್ನೂ ಬಹಳಷ್ಟು ಸಚಿವರು ಸರದಿ ಸಾಲಿನಲ್ಲಿ ನಿಂತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ವೇಳೆ ಸಾವಿರಾರು ಕೋಟಿ ರೂ. ಭ್ರಷ್ಟಾಚಾರ ನಡೆದಿದೆ. ಇನ್ನೂ ಹಲವು ಸಚಿವರು ಭ್ರಷ್ಟಾಚಾರಕ್ಕೆ ಬಲಿಯಾಗಲಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರದಲ್ಲಿ 40 ರಷ್ಟು ಕಮಿಷನ್ ದಂಧೆ ಇದೆ. ಕೆ.ಎಸ್. ಈಶ್ವರಪ್ಪ ರಾಜೀನಾಮೆ ನೀಡಿದರೆ ಆಗಲ್ಲ. ಅವರನ್ನು ಬಂಧಿಸಬೇಕು. ಈಶ್ವರಪ್ಪ ಬಂಧನವಾಗುವವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ ಎಂದರು.
ರಾಜ್ಯ ಬಿಜೆಪಿ ಸರ್ಕಾರ ಸಂಪೂರ್ಣ ಭ್ರಷ್ಟಾಚಾರದಲ್ಲಿ ಇಳಿದಿದೆ. ರಾಜ್ಯದ ಭ್ರಷ್ಟಾಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಗೂ ಗೊತ್ತಿದೆ. ಹೀಗಿದ್ದರೂ ಮೋದಿ ಇವರೆಲ್ಲರನ್ನೂ ರಕ್ಷಿಸುತ್ತಿದ್ದಾರೆ. ದೇಶ, ವಿದೇಶಗಳ ಆರ್ಥಿಕ ತಜ್ಞರು ಈಗಾಗಲೇ ಎಚ್ಚರಿಸಿದ್ದಾರೆ. ಜನ ಎಚ್ಚೆತ್ತುಕೊಳ್ಳದಿದ್ದರೆ ಶ್ರೀಲಂಕಾಕ್ಕೆ ಬಂದ ಸ್ಥಿತಿ ಭಾರತಕ್ಕೂ ಬರಲಿದೆ ಎಂದು ಹೇಳಿದ್ದಾರೆ.
PublicNext
16/04/2022 01:00 pm