ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗಮನ ಬೇರೆಡೆ ಸೆಳೆಯಲು ಶಿವಮೊಗ್ಗದಲ್ಲಿ ಮತ್ತೊಂದು ಗಲಭೆಗೆ ಸಂಚು ರೂಪಿಸಲಾಗಿತ್ತು: ಡಿಕೆಶಿ

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಆತ್ಮಹತ್ಯೆ ಪ್ರಕರಣದ ಗಮನ ಬೇರೆಡೆ ಸೆಳೆಯಲು ಶಿವಮೊಗ್ಗದಲ್ಲಿ ಮುಸ್ಲಿಂ ಯುವಕನ ಹತ್ಯೆ ಮೂಲಕ ಕೋಮು ಗಲಭೆಗೆ ಸಂಚು ರೂಪಿಸಲಾಗಿದ್ದು, ಇದರ ಹಿಂದೆ ಪ್ರಭಾವಿ ವ್ಯಕ್ತಿಗಳ ಕೈವಾಡವಿದೆ. ಶಿವಮೊಗ್ಗದಲ್ಲಿ ಒಂದು ಟ್ರಸ್ಟ್ ಇದ್ದು, ಅದರಲ್ಲಿ ದೊಡ್ಡವರು ಸದಸ್ಯರಾಗಿದ್ದಾರೆ. ಆ ಟ್ರಸ್ಟ್ ಸದಸ್ಯರು ಹಾಗೂ ಬೆರೆಯವರೆಲ್ಲ ಸೇರಿ, ಕೊಲೆ ಸಂಚಿಗೆ ತಯಾರಿ ಮಾಡಿದ್ದಾರೆ. ಶಿವಮೊಗ್ಗ ಪೊಲೀಸರು ಬುದ್ಧಿವಂತಿಕೆ ಪ್ರದರ್ಶಿಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಪೊಲೀಸರು ಈ ಕ್ರಮ ತೆಗೆದುಕೊಳ್ಳದಿದ್ದರೆ ರಾಜ್ಯದಲ್ಲಿ ಕೋಮು ಗಲಭೆ ನಡೆಯುವ ಸಂಭಾವವಿತ್ತು. ಈ ಪ್ರಕರಣದ ಎಫ್ ಐಆರ್ ನನ್ನ ಬಳಿ ಇದೆ. ಟ್ರಸ್ಟ್ ಸದಸ್ಯನೂ ಆಗಿರುವ ಪ್ರಮುಖ ಆರೋಪಿಯೊಬ್ಬ ತಲೆಮರೆಸಿಕೊಂಡಿದ್ದಾನೆ ಎಂಬುದಾಗಿ ಸ್ಪೋಟಕ ಮಾಹಿತಿಯನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೊರ ಹಾಕಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ತಂಡದ ಶಿವಮೊಗ್ಗ ಪ್ರತಿಭಟನೆ ಯೋಜನೆ ಮುಂದಕ್ಕೆ ಹಾಕಿದ್ದು, ನಾನು ಕೂಡ ಅಲ್ಲಿಗೆ ಹೋಗಬೇಕು ಎಂದು ಅಲ್ಲಿಂದ ಒತ್ತಡ ಬರುತ್ತಿದೆ. ಪೊಲೀಸ್ ಇಲಾಖೆ ಜವಾಬ್ದಾರಿಯಾಗಿ ಕಾರ್ಯನಿರ್ವಹಿಸಿದ್ದು, ಆ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

Edited By : Nagaraj Tulugeri
PublicNext

PublicNext

16/04/2022 03:44 pm

Cinque Terre

25.25 K

Cinque Terre

1