ನವದೆಹಲಿ: ಕೋವಿಡ್ ಸಮಯದಲ್ಲಿ 'ಸರ್ಕಾರದ ನಿರ್ಲಕ್ಷ್ಯ'ದಿಂದ 40 ಲಕ್ಷ ಭಾರತೀಯರು ಸಾವನ್ನಪ್ಪಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.ಈ ಕುರಿತು ಟ್ವೀಟ್ ಮಾಡಿದ ಅವರು, ಪ್ರಧಾನಿ ಮೋದಿ ಸತ್ಯ ಹೇಳುವುದಿಲ್ಲ. ಬೇರೆಯವರಿಗೂ ಹೇಳಲು ಬೀಡುವುದಿಲ್ಲ ಹಾಗಾಗಿಯೇ 40 ಲಕ್ಷ ಭಾರತೀಯರು ಸಾವನ್ನಪ್ಪಿದ್ದರು ಯಾರಿಗೂ ಮಾಹಿತಿಲ್ಲ ಎಂದಿದ್ದಾರೆ.
ವಿಶ್ವ ಸಂಸ್ಥೆಯು ಕೋವಿಡ್ ನಿಂದ ಸಾವನ್ನಪ್ಪಿದ ಸಂಖ್ಯೆಯನ್ನು ಬಹಿರಂಗಪಡಿಸುವ ಪ್ರಯತ್ನಕ್ಕೆ ಭಾರತ ತಡೆಯೊಡ್ಡುತ್ತಿದೆ ಎಂದು ಹೇಳಿದ್ದಾರೆ. ಇದೇ ವೇಳೆ ಮೋದಿ ಸರ್ಕಾರ ಮೃತರ ಎಲ್ಲಾ ಕುಟುಂಬಗಳಿಗೆ ತಲಾ ನಾಲ್ಕು ಲಕ್ಷ ರೂಪಾಯಿ ಪರಿಹಾರವನ್ನು ನೀಡಬೇಕು ಎಂದು ಮತ್ತೊಮ್ಮೆ ಒತ್ತಾಯಿಸಿದ್ದಾರೆ.
ಟ್ವಿಟರ್ ನಲ್ಲಿ, ಗಾಂಧಿ ಅವರು ನ್ಯೂಯಾರ್ಕ್ ಟೈಮ್ಸ್ ವರದಿಯ ಸ್ಕ್ರೀನ್ಶಾಟ್ ಅನ್ನು ಹಂಚಿಕೊಂಡಿದ್ದಾರೆ, ಇದು ಜಾಗತಿಕ ಕೋವಿಡ್ ಸಾವಿನ ಸಂಖ್ಯೆಯನ್ನು ಸಾರ್ವಜನಿಕಗೊಳಿಸಲು WHO ನ ಪ್ರಯತ್ನಗಳನ್ನು ಭಾರತ ತಡೆಯುತ್ತಿದೆ ಎಂದು ಹೇಳಿಕೊಂಡಿದೆ.
PublicNext
17/04/2022 10:25 pm