ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಕೇಸ್ ಸಂಬಂಧಿಸಿದಂತೆ ಈಶ್ವರಪ್ಪ ರಾಜೀನಾಮೆ ಹಾಗೂ ಬಂಧನ ಕೋರಿ ಸಿಎಂ ಮನೆ ಎದುರು ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು.
ಈ ಹಿನ್ನೆಲೆಯಲ್ಲಿಯೇ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ 36 ಜನರ ವಿರುದ್ಧ ಈಗ ಎಫ್ಐಆರ್ ದಾಖಲಾಗಿದೆ.
ಏಪ್ರಿಲ್-14 ರಂದು ಸಿಎಂ ಬಸವರಾಜ್ ಬೊಮ್ಮಾಯಿ ನಿವಾಸದಲ್ಲಿ ಕಾನೂನು ಬಾಹಿರವಾಗಿಯೇ ಮುತ್ತಿಗೆ ಹಾಕಲು ಪ್ರಯತ್ನಿಸಲಾಗಿತ್ತು.
ಈ ಕಾರಣಕ್ಕೇನೆ ಈಗ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ ಒಳಗೊಂಡಂತೆ ಕಾಂಗ್ರೆಸ್ ನ 36 ನಾಯಕರ ವಿರುದ್ಧ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
PublicNext
18/04/2022 11:29 am