ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಂಪುಟ ವಿಸ್ತರಣೆ ಬಗ್ಗೆ ಸದ್ಯದರಲ್ಲೇ ನಡ್ಡಾ ನೇತೃತ್ವದಲ್ಲಿ ಸಭೆ: ಸಿಎಂ

ಬೆಂಗಳೂರು : ಸಂಪುಟ ವಿಸ್ತರಣೆ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ನವದೆಹಲಿಯಲ್ಲಿ ಕರ್ನಾಟಕದ ಬಗ್ಗೆ ವಿಶೇಷ ಸಭೆ ಕರೆಯುವುದಾಗಿ ತಿಳಿಸಿದ್ದಾರೆ. ಸಭೆಯ ನಂತರ ದೆಹಲಿಗೆ ಬರುವಂತೆ ನಡ್ಡಾ ಅವರು ತಮಗೆ ತಿಳಿಸಿದ್ದಾರೆ. ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಬಗ್ಗೆ ಅಲ್ಲಿಯೇ ತೀರ್ಮಾನವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ತಮ್ಮ ನಿವಾಸದ ಬಳಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಬಗ್ಗೆ ದೆಹಲಿಯಲ್ಲಿ ಸಭೆ‌ ನಡೆಸುತ್ತೇವೆ. ಸಭೆಯ ನಂತರ ಮಾಹಿತಿ ನೀಡುತ್ತೇನೆ. ಆ ನಂತರ ದೆಹಲಿಗೆ ಬರುವಂತೆ ನಡ್ಡಾ ಅವರು ತಮಗೆ ಹೇಳಿದ್ದಾಗಿ ತಿಳಿಸಿದರು. ಹುಬ್ಬಳ್ಳಿಯ ಗಲಭೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಘಟನೆಗೆ ಸಂಬಂಧಿಸಿದ ಎಲ್ಲರನ್ನೂ ಬಂಧಿಸಲಾಗಿದೆ. ಅದರ ಹಿಂದಿರುವ ನಾಯಕರ ತನಿಖೆಯಾಗಿ ತಪ್ಪಿತಸ್ಥರ ವಿರುದ್ಧ ಕಾನೂನಿನ ಕ್ರಮ ಜರುಗಿಸಲಾಗುವುದು ಎಂದರು.

Edited By : Nagaraj Tulugeri
PublicNext

PublicNext

18/04/2022 03:50 pm

Cinque Terre

64.5 K

Cinque Terre

0

ಸಂಬಂಧಿತ ಸುದ್ದಿ