ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಧಾನಸಭಾ ಚುನಾವಣೆಯಲ್ಲಿ 50 ಸನ್ಯಾಸಿಗಳ ಸ್ಪರ್ಧೆ : ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

ಭಟ್ಕಳ (ಉತ್ತರ ಕನ್ನಡ) : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಂದ ಪ್ರೇರಣೆ ಪಡೆದಿರುವ ಸುಮಾರು 50 ಸನ್ಯಾಸಿಗಳು ಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದೇವೆ ಎಂದು ಉಜಿರೆ ಶ್ರೀರಾಮಕ್ಷೇತ್ರದ ಪೀಠಾಧಿಪತಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.

ಹೊಳೆ ಹಳೆಕೋಟೆ ಶ್ರೀಕ್ಷೇತ್ರ ಹನುಮಂತ ದೇವರ ಪುನರ್ ಪ್ರತಿಷ್ಠಾ ಮಹೋತ್ಸವದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಶಾಸಕಾಂಗದ ಸಮಗ್ರ ಬದಲಾವಣೆಗಾಗಿ, ರಾಜ್ಯದಲ್ಲಿ ಸನ್ಯಾಸಿಗಳು ಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದಾರೆ ಎಂದಿದ್ದಾರೆ.

ಇಂದಿನ ಕಾಲದಲ್ಲಿ ರಾಜಕೀಯಕ್ಕೆ ಬರುವುದೇ ಪ್ರಚಾರಕ್ಕಾಗಿ, ಹಣಕ್ಕಾಗಿ, ಸುಖಭೋಗಕ್ಕಾಗಿ ಎಂದಿದ್ದಾರೆ.

‘ಉತ್ತರಾಖಂಡದ ನಾಗಾ ಸಾಧುಗಳ ಜೂನಾ ಅಖಾಡದಲ್ಲಿ ನಾನೂ ಒಬ್ಬ ಪಂಥನಿದ್ದೇನೆ. ಈಗಾಗಲೇ ಈ ಬಗ್ಗೆ ನಮ್ಮಲ್ಲಿ ಹಲವು ಚರ್ಚೆಗಳು ನಡೆದಿವೆ. ಸನಾತನ ಹಿಂದೂ ಧರ್ಮವನ್ನು ತಿದ್ದಬೇಕು. ಹಾಗಾಗಿ ರಾಮರಾಜ್ಯ ಕಲ್ಪನೆಯಲ್ಲಿ ಭಗವದ್ಗೀತೆಯನ್ನು ಪಕ್ಷದ ಚಿಹ್ನೆಯನ್ನಾಗಿ ಇಟ್ಟುಕೊಂಡು ಭಟ್ಕಳದಿಂದ ಪ್ರಾಯೋಗಿಕವಾಗಿ ನಾನು ಸ್ಪರ್ಧಿಸುವ ಯೋಚನೆಯಲ್ಲಿದ್ದೇನೆ’ ಎಂದು ತಿಳಿಸಿದರು.

Edited By : Nirmala Aralikatti
PublicNext

PublicNext

18/04/2022 06:39 pm

Cinque Terre

61.65 K

Cinque Terre

20