ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಏಪ್ರಿಲ್ 21ರಂದು ದೇಶವನ್ನುದ್ದೇಶಿಸಿ ಮೋದಿ ಮಾತು

ದೆಹಲಿ : ಏಪ್ರಿಲ್ 21 ರಂದು ಸಿಖ್ ಗುರು ತೇಗ್ ಬಹದ್ದೂರ್ ಅವರ 400 ನೇ ಪ್ರಕಾಶ್ ಪುರಬ್ (ಜನ್ಮ ದಿನಾಚರಣೆ) ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಸಂಸ್ಕೃತಿ ಸಚಿವಾಲಯ ತಿಳಿಸಿದೆ.ಕೆಂಪು ಕೋಟೆಯಿಂದ ರಾಷ್ಟ್ರವನ್ನು ಉದ್ದೇಶಿಸಿ ಭಾಷಣ ಆರಂಭಿಸಲಿರುವ ಅವರು ಅದೇ ದಿನ ಪ್ರಧಾನಿ ಮೋದಿ ಅವರ ಸ್ಮರಣಾರ್ಥ ನಾಣ್ಯ ಮತ್ತು ಅಂಚೆ ಚೀಟಿಯನ್ನು ಬಿಡುಗಡೆ ಮಾಡಲಿದ್ದಾರೆ.

ಈ ಶುಭ ಸಂದರ್ಭದಲ್ಲಿ ನಾಲ್ಕು ನೂರು ‘ರಾಗೀಸ್’ (ಸಿಖ್ ಸಂಗೀತಗಾರರು) ‘ಶಾಬಾದ್ ಕೀರ್ತನ್’ ನಲ್ಲಿ ಪ್ರದರ್ಶನ ನೀಡುತ್ತಾರೆ ಎಂದು ಸಚಿವಾಲಯ ತಿಳಿಸಿದೆ. ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾಸೇರಿದಂತೆ ಅನೇಕ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ವಿದೇಶಗಳ ಹಲವಾರು ಪ್ರಮುಖ ವ್ಯಕ್ತಿಗಳು ಭಾಗವಾಗಲಿದ್ದಾರೆ.

ಈ ಸಂದರ್ಭದಲ್ಲಿ ಪ್ರಧಾನಿ ಅಂಚೆ ಚೀಟಿ ಮತ್ತು ನಾಣ್ಯವನ್ನು ಬಿಡುಗಡೆ ಮಾಡಲಿದ್ದಾರೆ ಎಂದು ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ತಿಳಿಸಿದ್ದಾರೆ.

Edited By : Nirmala Aralikatti
PublicNext

PublicNext

18/04/2022 10:50 pm

Cinque Terre

42.36 K

Cinque Terre

21

ಸಂಬಂಧಿತ ಸುದ್ದಿ