ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಂತೋಷ್ ಕುಟುಂಬಕ್ಕೆ ಕೆಪಿಸಿಸಿಯಿಂದ 11 ಲಕ್ಷ ರೂ. ಪರಿಹಾರ : ಚೆಕ್ ಹಸ್ತಾಂತರಿಸಿದ ಡಿಕೆಶಿ

ಬೆಳಗಾವಿ: ಮಾಜಿ ಸಚಿವ ಈಶ್ವರಪ್ಪನವರೆ ನನ್ನ ಸಾವಿಗೆ ನೇರ ಕಾರಣ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡ ಬೆಳಗಾವಿಯ ಗುತ್ತಿಗೆದಾರ ಸಂತೋಷ ಕುಟುಂಬಕ್ಕೆ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭೇಟಿ ನೀಡಿ ಸಂತೋಷ್ ಪಾಟೀಲ್ ಅವರ ಪತ್ನಿಗೆ ಕೆಪಿಸಿಸಿ ವತಿಯಿಂದ 11 ಲಕ್ಷ ರೂಪಾಯಿ ಪರಿಹಾರ ಚೆಕ್ ವಿತರಿಸಿದರು.

ಬೆಳಗಾವಿ ತಾಲೂಕಿನ ಬಡಸ್ ಗ್ರಾಮದ ನಿವಾಸಕ್ಕೆ ಮಂಗಳವಾರ ಭೇಟಿ ಕೊಟ್ಟ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು, ಸಂತೋಷ್ ಪಾಟೀಲ್ ಅವರ ಪತ್ನಿಗೆ ಕೆಪಿಸಿಸಿ ವತಿಯಿಂದ 11 ಲಕ್ಷ ರೂಪಾಯಿ ಪರಿಹಾರ ಚೆಕ್ ವಿತರಿಸಿದರು.ಸಂತೋಷ್ ಪಾಟೀಲ್ ಅವರು ಸಾವನ್ನಪ್ಪಿದಾಗ ಅವರ ನಿವಾಸಕ್ಕೆ ಭೇಟಿ ನೀಡಿದ ಕಾಂಗ್ರೆಸ್ ನಿಯೋಗದಲ್ಲಿದ್ದ ಡಿ. ಕೆ. ಶಿವಕುಮಾರ್ ಅವರು, 11 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದ್ದರು. ಅದರಂತೆ ಇಂದು ಬೆಳಗಾವಿಗೆ ತೆರಳಿ ಪರಿಹಾರ ನೀಡಿದ್ದಾರೆ.

ಇದಲ್ಲದೆ ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ ಅವರು ವೈಯಕ್ತಿಕವಾಗಿ 5 ಲಕ್ಷ ರು. ಪರಿಹಾರ ಚೆಕ್ ನೀಡಿದರು. ಶಾಸಕಿಯರಾದ ಲಕ್ಷ್ಮಿ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್, ಮಹಂತೇಶ್ ಎಸ್ ಕೌಜಲಗಿ, ಎಂಎಲ್ಸಿ ಚನ್ನರಾಜ್ ಹಟ್ಟಿಹೊಳಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ್ ನವಲಗಟ್ಟಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Edited By : Nirmala Aralikatti
PublicNext

PublicNext

19/04/2022 06:48 pm

Cinque Terre

94.82 K

Cinque Terre

35

ಸಂಬಂಧಿತ ಸುದ್ದಿ