ದಾವಣಗೆರೆ: ಮಠಮಾನ್ಯಗಳಿಗೆ ನೀಡಿರುವ ಅನುದಾನ ಪಡೆಯಲು ಶೇ 30ರಷ್ಟು ಕಮಿಷನ್ ಪಡೆಯಲಾಗುತ್ತದೆ ಎಂಬುದಾಗಿ ಆರೋಪಿಸಿರುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂಪ್ಪ ಅವರು ಶಿರಹಟ್ಟಿಯ ಫಕ್ಕಿರೇಶ್ವರ ಸ್ವಾಮಿ ಮಠದ ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.
ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾಮೀಜಿಯಾದವರು ಇಂತಹ ಹೇಳಿಕೆ ನೀಡುವುದು ಅವರಿಗೆ ಶೋಭೆ ತರುವುದಿಲ್ಲ ಎಂದು ಹೇಳಿದರು. ಬಳಿಕ, ರಾಜ್ಯದಲ್ಲಿ ಕೋಮು ಸಾಮರಸ್ಯ ಕದಡುವ ಪ್ರಯತ್ನಗಳು ನಡೆಯುತ್ತಿವೆ. ಈ ಹಿಂದೆಯೂ ರಾಜ್ಯದಲ್ಲಿ ಕೋಮು ಸಾಮರಸ್ಯವಿತ್ತು, ಈಗಲೂ ಇದೆ. ಆದರೆ ಕೆಲವರು ಉದ್ದೇಶಪೂರ್ವಕವಾಗಿ ಕೋಮು ಸೌಹಾರ್ದತೆಗೆ ಧಕ್ಕೆ ತರುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ದೂರಿದರು.
PublicNext
19/04/2022 08:09 pm