ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿಎಸ್ ಯಡಿಯೂರಪ್ಪ ಹೆಸರು‌ ಘೋಷಣೆ

ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೆಸರಿಡಲು ಸಚಿವ ಸಂಪುಟ ತೀರ್ಮಾನಿಸಿ ಕೇಂದ್ರಕ್ಕೆ ಶಿಫಾರಸು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಹಿಂದೆ ಶಿವಮೊಗ್ಗ ಏರ್‌ಪೋರ್ಟ್‌ಗೆ ಬಿ.ಎಸ್.ಯಡಿಯೂರಪ್ಪ ಹೆಸರು ಇಡುವಂತೆ ಒತ್ತಾಯ ಕೇಳಿ ಬಂದಿತ್ತು. ಶಿವಮೊಗ್ಗ ಜಿಲ್ಲೆಯ ಬಿಜೆಪಿ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರ ನಿಯೋಗ ಈ ಬಗ್ಗೆ ನಾಳೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಿದ್ದರು. ಈ ಗೊಂದಲಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಇಂದು (ಬುಧವಾರ) ತೆರೆ ಎಳೆದಿದ್ದಾರೆ.

ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಬಿ.ಎಸ್.ಯಡಿಯೂರಪ್ಪನವರ ಶ್ರಮ ಮತ್ತು ಆಸಕ್ತಿ ಈ ವಿಮಾನ ನಿಲ್ದಾಣ ರಚನೆಯಲ್ಲಿದೆ. ಹಾಗಾಗಿ ಅವರ ಹೆಸರನ್ನು ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುತ್ತಿದೆ ಎಂದು ತಿಳಿಸಿದರು.

Edited By :
PublicNext

PublicNext

20/04/2022 08:12 pm

Cinque Terre

136.53 K

Cinque Terre

56

ಸಂಬಂಧಿತ ಸುದ್ದಿ