ಚಿಕ್ಕಬಳ್ಳಾಪುರ: ಪ್ರಧಾನಿ ನರೇಂದ್ರ ಮೋದಿ ಹೆಂಡತಿಯನ್ನು ನೋಡಿಕೊಳ್ಳಲಾಗದವರು. ಅವರು ಶ್ರೀರಾಮನ ಬಗ್ಗೆ ಮಾತಾನಾಡುವುದು ಸರಿಯಲ್ಲ ಎಂದು ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಹೇಳಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಬುರುಡುಗುಂಟೆ ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ಬಿಜೆಪಿ ವಿರುದ್ಧ ಉಗ್ರಪ್ಪ ಕಿಡಿಕಾರಿದ್ದಾರೆ. "ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರದ ಗಂಗೋತ್ರಿ ಹರಿಯುತ್ತಿದೆ. ಕಾಂಗ್ರೆಸ್ನವರು ಯಾರಾದರೂ ಭ್ರಷ್ಟಾಚಾರ ಮಾಡಿದ್ರೆ ಒದ್ದು ಒಳಗೆ ಹಾಕಿ. 550 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿದೆ. ಒಂದು ಪಿಎಸ್ಐ ಹುದ್ದೆಗೆ 80 ಲಕ್ಷ ರೂಪಾಯಿ ಲಂಚ ಪಡೆಯುತ್ತೀರಿ" ಎಂದು ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದರು.
PublicNext
21/04/2022 09:46 am