ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಬುರಗಿ : ಪಿಎಸ್ಐ ಪರೀಕ್ಷಾ ಅಕ್ರಮ: ಇಬ್ಬರನ್ನು ಬಂಧಿಸಲಾಗಿದೆ ಎಂದ ಸಿಎಂ ಬೊಮ್ಮಾಯಿ

ಕಲಬುರಗಿ : ಪಿಎಸ್ಐ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಅಫಜಲ್ ಪುರದ ಶಾಸಕ ಎಂ.ವೈ.ಪಾಟೀಲ್ ಅವರ ಗನ್ ಮ್ಯಾನ್ ಅಯ್ಯಾಳಿ ದೇಸಾಯಿ ಹಾಗೂ ರುದ್ರಗೌಡ ಎಂಬುವರನ್ನು ಬಂಧಿಸಲಾಗಿದೆ. ಈ ಪ್ರಕರಣದ ಮೂಲಕ್ಕೆ ಹೋಗಿ ತನಿಖೆ ಮಾಡಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಅವರು ಇಂದು ಕಲ್ಬುರ್ಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಯುಪಿಎಸ್ಸಿ ಮಾದರಿಯಲ್ಲಿ ನೇಮಕಾತಿ ಪರೀಕ್ಷೆ ನಡೆಸುವ ವ್ಯವಸ್ಥೆ ಮಾಡಲಾಗಿತ್ತು. ಈ ಭದ್ರತೆಯ ವ್ಯವಸ್ಥೆ, ಪಾರದರ್ಶಕತೆಯ ನಡುವೆಯೂ ಲೋಪವೆಸಗಿ ವಾಮಮಾರ್ಗದಲ್ಲಿ ಅಕ್ರಮ ಕಾರ್ಯಾಚರಣೆ ಮಾಡಿರುವುದಕ್ಕೆ ಪೂರ್ಣವಿರಾಮ ಹಾಕಬೇಕೆಂದು ಸರ್ಕಾರದ ಚಿಂತನೆಯಾಗಿದೆ ಎಂದು ಅವರು ತಿಳಿಸಿದರು.

Edited By :
PublicNext

PublicNext

22/04/2022 12:46 pm

Cinque Terre

31.78 K

Cinque Terre

0

ಸಂಬಂಧಿತ ಸುದ್ದಿ