ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಒಬ್ಬ ಮೌಲ್ವಿ ತಪ್ಪು ಮಾಡಿದ್ರೆ ಎಲ್ಲರೂ ತಪ್ಪು ಮಾಡಿದ್ದಾರೆಂದು ಅರ್ಥವಲ್ಲ: ಸಿದ್ದರಾಮಯ್ಯ

ಬೆಂಗಳೂರು: ಯಾರೋ ಒಬ್ಬ ಮೌಲ್ವಿ ತಪ್ಪು ಮಾಡಿದ್ದಾರೆಂದರೆ ಎಲ್ಲರೂ ತಪ್ಪು ಮಾಡಿದ್ದಾರೆ ಎಂದು ಅರ್ಥವಲ್ಲ. ಬಂಧಿತರಾದವರು ಮೌಲ್ವಿ ಹೌದೋ ಅಲ್ಲವೋ ನನಗೆ ಗೊತ್ತಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಪತ್ರಿಕಾ ಪ್ರಕಟಣೆಯಲ್ಲಿ ಈ ಬಗ್ಗೆ ಬರೆದಿರುವ ಅವರು, ಇಂತಹ ವಿಚಾರಗಳಿಂದ ಇನ್ನಷ್ಟು ಕೆಸರೆರಚುವ ಕೆಲಸ ಮಾಡುತ್ತಿದ್ದಾರೆ. ಸಮಾಜದಲ್ಲಿ ಶಾಂತಿ ಸೃಷ್ಟಿಸುವ ಕೆಲಸವನ್ನು ಸರ್ಕಾರ ಮಾಡಬೇಕು. ಶಾಂತಿ ಕದಡುವ ಪ್ರಯತ್ನ ಯಾರೂ ಮಾಡಬಾರದು. ಹುಬ್ಬಳ್ಳಿ ಗಲಭೆಯನ್ನು ನಾನು ಈಗಾಗಲೇ ಖಂಡಿಸಿದ್ದೇನೆ. ತಪ್ಪಿತಸ್ಥರು ಯಾರೇ ಆಗಿದ್ದರೂ ಅವರಿಗೆ ಶಿಕ್ಷೆ ಆಗಬೇಕು. ನಿರಪರಾಧಿಗಳ ಮೇಲೆ ಕ್ರಮ ಬೇಡ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೇಜ್ರಿವಾಲ್ ಅವರು ರಾಜ್ಯ ಸರ್ಕಾರದ ಮೇಲೆ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿರುವುದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ತೀರ್ಮಾನವನ್ನು ಜನಗಳಿಗೆ ಬಿಡೋಣ. ಈ 40 ಪರ್ಸೆಂಟ್ ಕಮಿಷನ್ ಸರ್ಕಾರವನ್ನು ಕಿತ್ತು ಹಾಕಿ ಎಂದು ನಾವೂ ಹೇಳುತ್ತಿದ್ದೀವಿ. ಜನರೇ ತೀರ್ಮಾನ ಮಾಡಲಿ. ಆಪ್ ಪಕ್ಷದ ಬಗ್ಗೆ ನಾನು ಮಾತನಾಡಲ್ಲ. ಅದು ಕೂಡ ಬಹಳ ವರ್ಷಗಳಿಂದ ರಾಜಕೀಯದಲ್ಲಿದೆ. ದೊಡ್ಡ ಪಕ್ಷ ಅದು. ರಾಜ್ಯದಲ್ಲಿ ಅವರು ಇವತ್ತಿನವರೆಗೆ ಚುನಾವಣೆ ಎದುರಿಸಿರಲಿಲ್ಲ. ಕೇಜ್ರೀವಾಲ್ ಬಂದು ನಮ್ಮ ಅಭ್ಯರ್ಥಿಗಳನ್ನು ಚುನಾವಣೆಗೆ ಹಾಕ್ತೀವಿ ಎಂದಿದ್ದಾರೆ. ಹಾಕಲಿ, ಜನ ತೀರ್ಮಾನ ಮಾಡುತ್ತಾರೆ ಎಂದಿದ್ದಾರೆ.

ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ಎಸಗಿರುವುದು ಜಾಮೀನು ರಹಿತ ಅಪರಾಧ. ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ಈಗ ತನಿಖೆ ನಡೆಯುತ್ತಿದ್ದು, ನಿಷ್ಪಕ್ಷಪಾತವಾಗಿ ನಡೆಯಲಿ. ಆ ನಂತರ ಅಪರಾಧಿಗಳ ಮೇಲೆ ಕಾನೂನು ಕ್ರಮ ಜರುಗಿಸಲಿ ಎಂದು ಒತ್ತಾಯಿಸಿದ್ದಾರೆ.

Edited By : Nagaraj Tulugeri
PublicNext

PublicNext

22/04/2022 08:01 pm

Cinque Terre

44.9 K

Cinque Terre

45

ಸಂಬಂಧಿತ ಸುದ್ದಿ