ಬೆಂಗಳೂರು: ಯಾವುದೇ ಕಾರಣಕ್ಕೂ ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಇಡಬೇಡಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದಾರೆ.
ಈ ಸಂಬಂಧ ಸಿಎಂ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಬಿಎಸ್ ಯಡಿಯೂರಪ್ಪ ಅವರು, 'ಶಿವಮೊಗ್ಗ ಜಿಲ್ಲೆಯ ಬಹುದಿನದ ಕನಸಾದ ವಿಮಾನ ನಿಲ್ದಾಣ ನನಸಾಗುತ್ತಿದೆ. ಸೋಗಾನೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣದ ಕಾಮಗಾರಿಯನ್ನು ಇತ್ತೀಚೆಗೆ ತಾವು ವೀಕ್ಷಣೆ ಮಾಡಿದ್ದೀರಿ. ಅಲ್ಲದೇ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಅಗತ್ಯವಾದ ಅನುದಾನ ತ್ವರಿತವಾಗಿ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ ನಿಮಗೆ ಧನ್ಯವಾದಗಳು' ಎಂದಿದ್ದಾರೆ.
PublicNext
24/04/2022 04:03 pm