ದಾವಣಗೆರೆ: ಬುಲ್ಡೋಜರ್ ತರೋಕೆ ಇದು ಉತ್ತರ ಪ್ರದೇಶ ಅಲ್ಲ. ಯುಪಿಗೆ ಕರ್ನಾಟಕವನ್ನು ಹೋಲಿಸಬೇಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.
ದಾವಣಗೆರೆಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಉತ್ತರ ಪ್ರದೇಶದಲ್ಲಿ ಬೇರೆ ಬೇರೆ ವಿಷಯಗಳಿದ್ದವು. ಆದರೆ ಕರ್ನಾಟಕದಲ್ಲಿ ಪ್ರಜ್ಞಾವಂತರಿದ್ದಾರೆ. ಇಲ್ಲಿ ಬಿಜೆಪಿ ಸರ್ಕಾರ ಯಾಕಾದ್ರೂ ಬಂದಿದೆ ಎಂದು ಜನ ಕೊರಗುತ್ತಿದ್ದಾರೆ. ಬಿಜೆಪಿಯವರು ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ. ಅವರು ಜನಾದೇಶದಿಂದ ಅಧಿಕಾರಕ್ಕೆ ಬಂದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಶಾಸಕರನ್ನು ಖರೀದಿ ಮಾಡಿ ಬಿಜೆಪಿಯವರು ಅಧಿಕಾರ ನಡೆಸುತ್ತಿದ್ದಾರೆ. ಇದನ್ನ ಸದನದಲ್ಲೇ ಶಾಸಕ ಶ್ರೀನಿವಾಸಗೌಡರೇ ಒಪ್ಪಿಕೊಂಡಿದ್ದಾರೆ. ಆಪರೇಷನ್ ಕಮಲದಿಂದ ಬಿಜೆಪಿ ಸರ್ಕಾರ ಜನ್ಮ ತಾಳಿದೆ. ಹೀಗಾಗಿ ಔಷಧಿ, ಗೊಬ್ಬರ, ನೇಮಕಾತಿ ಎಲ್ಲದರಲ್ಲೂ ದುಡ್ಡು ಹೊಡೆಯುತ್ತಿದ್ದಾರೆ. ಕಾಮಗಾರಿಗಳಲ್ಲಿ ಶೇ. 40 ಕಮೀಷನ್ ಪಡೆಯುತ್ತಿದ್ದಾರೆ. ಇವರು ಇವತ್ತು ಇರ್ತಾರೆ, ನಾಳೆ ಹೋಗ್ತಾರೆ. ರಾಜ್ಯಕ್ಕೆ ಬಿಜೆಪಿ ಸರ್ಕಾರ ಕಪ್ಪು ಚುಕ್ಕೆ ತಂದಿದೆ ಎಂದು ಟೀಕಿಸಿದರು.
PublicNext
24/04/2022 09:11 pm