ರಾಜ್ಯದಲ್ಲಿ ಒಂದೊಂದು ಪರೀಕ್ಷಗೆಳ ಅಕ್ರಮ ಬಯಲಾಗುತ್ತಿದೆ. ಸದ್ಯ ಪಿಎಸ್ ಐ ನೇಮಕಾತಿ ವಿರುದ್ಧ ಧ್ವನಿ ಎತ್ತಿದ ಶಾಸಕ ಪ್ರಿಯಾಂಕ್ ಖರ್ಗೆ ಅವರನ್ನೇ ತನಿಖೆಗೆ ಒಳಪಡಿಸಬೇಕು ಎಂದು ಒತ್ತಾಯಿಸುತ್ತಿರುವ ಸಚಿವ ಸುನಿಲ್ ಕುಮಾರ್ ಹೇಳಿಕೆ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಸದ್ಯ ಸಚಿವ ಸುನಿಲ್ ಕುಮಾರ್ ಪರಿಸ್ಥಿತಿ ಹೇಗಿದೆ ಅಂದ್ರೆ ‘ತಾ ಕಳ್ಳ, ಇತರರ ನಂಬ’ ಎಂಬಂತಾಗಿದೆ ಎಂದು ಟ್ವೀಟ್ ಮೂಲಕ ಕಿಡಿಕಾರಿದ್ದಾರೆ. ಇನ್ನು ಸಚಿವರ ಹೇಳಿಕೆ ಬೆನ್ನಲ್ಲೇ ಸಿಐಡಿ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ನೋಟಿಸ್ ಜಾರಿ ಮಾಡಿದೆ. ಇದೇಲ್ಲವನ್ನು ನೋಡಿದರೆ ಬಿಜೆಪಿ ನಾಯಕರ ಹಗರಣ ಬಗ್ಗೆ ಮಾತನಾಡುವವರ ಬಾಯಿ ಮುಚ್ಚಿಸುವ ಹುನ್ನಾರ ನಡೆದಿದೆ ಎಂದಿದ್ದಾರೆ.
PublicNext
25/04/2022 04:04 pm