ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಿಎಸ್‌ಐ ಹಗರಣ: ಮಾತಾಡಿದವರ ಬಾಯಿ ಮುಚ್ಚಿಸುವ ಹುನ್ನಾರ ನಡೆದಿದೆ ಎಂದ ಸಿದ್ದರಾಮಯ್ಯ

ಬೆಂಗಳೂರು: 'ಅಡಿಯಿಂದ ಮುಡಿವರೆಗೆ 100% ಭ್ರಷ್ಟಾಚಾರದ ಮಸಿ ಬಳಿದುಕೊಂಡಿರುವ ರಾಜ್ಯದ ಬಿಜೆಪಿ ಸರ್ಕಾರವನ್ನು ಸುಳ್ಳುಗಳ ಬಣ್ಣ ಹೊಡೆದು ಅಳಿಸಲಾಗದು. ಸರ್ಕಾರ, ತನಿಖಾ ಸಂಸ್ಥೆಗಳು ನಿಮ್ಮ ನಿಯಂತ್ರಣದಲ್ಲಿರಬಹುದು, ರಾಜ್ಯದ ಜನತೆ ನಮ್ಮ ಜೊತೆ ಇದ್ದಾರೆ' ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ಮೇಲೆ ಸಿಡಿಮಿಡಿಗೊಂಡಿದ್ದಾರೆ.

ಸಕ ಪ್ರಿಯಾಂಕ್ ಖರ್ಗೆಗೆ ಸಿಐಡಿ ಪೊಲೀಸರು ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ಧರಾಮಯ್ಯ ಪ್ರಿಯಾಂಕ್ ಖರ್ಗೆ ಬೆನ್ನಿಗೆ ನಿಂತಿದ್ದಾರೆ.

'ಪಿಎಸ್ಐ ನೇಮಕ ಭ್ರಷ್ಟಾಚಾರದ ವಿರುದ್ಧ ದನಿ ಎತ್ತಿದ್ದ ಶಾಸಕ ಪ್ರಿಯಾಂಕ್ ಖರ್ಗೆ ಅವರನ್ನೇ ತನಿಖೆಗೆ ಒಳಪಡಿಸಿ ಎಂದು ಒತ್ತಾಯಿಸುತ್ತಿರುವ ಸಚಿವ ಸುನೀಲ್ ಕುಮಾರ್ ಸ್ಥಿತಿ ‘ತಾ ಕಳ್ಳ, ಇತರರ ನಂಬ’ ಎಂಬಂತಾಗಿದೆ. ಈ ಬೆದರಿಕೆಗೆ ನಾವು ಜಗ್ಗುವುದಿಲ್ಲ. ಖರ್ಗೆಯವರ ಬೆನ್ನಹಿಂದೆ ಕಾಂಗ್ರೆಸ್ ಪಕ್ಷ ಇದೆ' ಎಂದಿದ್ದಾರೆ. ಸಚಿವ ಸುನಿಲ್‌ಕುಮಾರ್ ನೀಡಿದ ಹೇಳಿಕೆಯ ಬೆನ್ನಲ್ಲೇ ಸಿಐಡಿ ಪೊಲೀಸರು ಪ್ರಿಯಾಂಕ್ ಖರ್ಗೆ ಅವರ ವಿಚಾರಣೆಗೆ ನೋಟೀಸ್ ನೀಡಿದ್ದನ್ನು ನೋಡಿದರೆ, ಬಿಜೆಪಿ ನಾಯಕರು ಹಗರಣದ ಬಗ್ಗೆ ಮಾತನಾಡುವವರ ಬಾಯಿಮುಚ್ಚಿಸುವ ಹುನ್ನಾರ ನಡೆಸುತ್ತಿರುವಂತೆ ಕಾಣುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

Edited By : Nagaraj Tulugeri
PublicNext

PublicNext

25/04/2022 04:15 pm

Cinque Terre

31.06 K

Cinque Terre

8

ಸಂಬಂಧಿತ ಸುದ್ದಿ