ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನೀನು ದನ ಕಾಯೋನು, ದನ ಕಾಯೋಕೆ ಹೋಗು..! ಹಾಸನ EO ಗೆ ಹೆಚ್.ಡಿ.ರೇವಣ್ಣ ಕ್ಲಾಸ್

ಹಾಸನ : ನೀನು ದನ ಕಾಯೋನು, ದನ ಕಾಯೋಕೆ ಹೋಗು, ಇಓ ಕೆಲಸದಲ್ಲಿ ಯಾಕೆ ಇದ್ದೀಯಾ, ದನಕ್ಕೆ ಇಂಜೆಕ್ಷನ್ ಕೊಡೋಕೆ ಹೋಗು ಎಂದು ತಾ.ಪಂ ಇಓಗೆ ಏಕವಚನದಲ್ಲಿಯೇ ಮಾಜಿ ಸಚಿವ ಎಚ್.ಡಿ.ರೇವಣ್ಣ ತರಾಟೆಗೆ ತೆಗೆದುಕೊಂಡ ಘಟನೆ ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದಿದೆ.

ಹಾಸನದ ಕೆಂಚಟ್ಟಹಳ್ಳಿ ಬಳಿ ಇರುವ ಹೇಮಗಂಗೋತ್ರಿ ಸ್ನಾತಕೋತ್ತರ ಕೇಂದ್ರದ ಮುಂಭಾಗ ಟ್ರಕ್ ಟರ್ಮಿನಲ್ ನಿರ್ಮಾಣ ಮಾಡಲಾಗುತ್ತಿದೆ. ಇದಕ್ಕೆ ವಿದ್ಯಾರ್ಥಿಗಳು, ಗ್ರಾಮಸ್ಥರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಈ ವಿಚಾರವಾಗಿ ಜಿಲ್ಲಾಧಿಕಾರಿ ಕಚೇರಿ ಬಳಿ ಆಗಮಿಸಿ ಜಿಲ್ಲಾಧಿಕಾರಿ ಮತ್ತು ತಾಪಂ ಇಒ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ಇಒ ಕಾಮಗಾರಿ ನಡೆಸಲು ಡಿಸಿ ನಿರ್ದೇಶನ ನೀಡಿದ್ದರು ಹಾಗಾಗಿ ಕಾಮಗಾರಿ ನಡೆಸಿದ್ದೇವೆ ಎಂದು ತಿಳಿಸಿದರು. ಈ ಉತ್ತರ ಕೇಳಿ ಮತ್ತಷ್ಟು ಕೆರಳಿದ ರೇವಣ್ಣ, ಡಿಸಿ ಮನೆಗೆ ನುಗ್ಗು ಅಂತಾನೆ ಹೋಗಿ ನುಗ್ಗು ನೀನು. ಅವನ್ಯಾರು ಡಿಸಿ. ಇವರಿಬ್ಬರು ಸೇರಿಕೊಂಡು ಅದೇನ್ ಮಾಡ್ತರೆ ಮಾಡ್ಲಿ. ಎಷ್ಟು ಹೆಣ ಉರುಳಿಸುತ್ತಾರೆ ಉರುಳಿಸಲಿ. ಒಂದು ಪುಟಗೋಸಿ ವರ್ಗಾವಣೆಗೋಸ್ಕರ ಈ ರೀತಿ ಮಾಡ್ತೀರ ಎಂದು ಕಿಡಿಕಾರಿದರು.

ಈ ವೇಳೆ ಜಿಲ್ಲಾಧಿಕಾರಿ ಆರ್.ಗಿರೀಶ್, ಸ್ವಲ್ಪ ಸಮಾಧಾನವಾಗಿ ಕೇಳಿ ಸರ್ ನಾಳೆ, ನಾಡಿದ್ದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಭೆ ಕರೆಯುತ್ತೇನೆ ಎಂದು ತಿಳಿಸಿದರು.

Edited By : Nirmala Aralikatti
PublicNext

PublicNext

26/04/2022 09:38 am

Cinque Terre

166.59 K

Cinque Terre

15

ಸಂಬಂಧಿತ ಸುದ್ದಿ