ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

PSI ನೇಮಕಾತಿ ಅಕ್ರಮ ಕೇಸ್ : ಆರೋಪಿ ದಿವ್ಯಾ ಜೊತೆ ಡಿಕೆಶಿ

ಬೆಂಗಳೂರು: ರಾಜ್ಯದಲ್ಲಿ ಸಂಚಲನ ಸೃಷ್ಟಿಸಿರುವ ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಪ್ರಮುಖ ಆರೋಪಿ ಎನ್ನಲಾದ ಬಿಜೆಪಿ ಮಹಿಳಾ ಘಟಕದ ಮಾಜಿ ನಾಯಕಿ ದಿವ್ಯಾ ಹಾಗರಗಿ ತಲೆಮರೆಸಿಕೊಂಡಿರುವ ಮಧ್ಯೆ ಫೋಟೋವೊಂದು ಭಾರಿ ವೈರಲ್ ಆಗಿದೆ.

ಆರೋಪಿ ದಿವ್ಯಾ ಗೃಹ ಸಚಿವ ಅವರೊಂದಿಗೆ ಇದ್ದ ಫೋಟೋ ವೈರಲ್ ಆದ ಬೆನ್ನಲ್ಲೇ ಕಾಂಗ್ರೆಸ್ ನಾಯಕರು, ಆರಗ ಜ್ಞಾನೇಂದ್ರ ಅವರ ವಿಚಾರಣೆಗೆ ಆಗ್ರಹಿಸಿದ್ದರು.

ಈ ಎಲ್ಲಾ ಬೆಳವಣಿಗೆಗಳ ನಡುವೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೊಂದಿಗೆ ದಿವ್ಯಾ ಹಾಗರಗಿಯ ಇರೋ ಫೋಟೋವನ್ನು ಬಿಜೆಪಿ ತನ್ನ ಅಧಿಕೃತ ಖಾತೆಯಲ್ಲಿ ಹಂಚಿಕೊಂಡಿದೆ. ಅಧಿಕಾರದಲ್ಲಿ ಇಲ್ಲದೇ ಇದ್ದರೂ ವ್ಯವಸ್ಥೆಯಲ್ಲಿ ಭ್ರಷ್ಟಾಚಾರವನ್ನು ತುರುಕುವುದಕ್ಕೆ ಕಾಂಗ್ರೆಸ್ ನಾಯಕರಿಗೆ ಮಾತ್ರ ಸಾಧ್ಯ! ಪಿಎಸ್ ಐ ನೇಮಕ ಹಗರಣ ಕಾಂಗ್ರೆಸ್ ಕೃಪಾಪೋಷಿತರ ನಾಟಕ ಮಂಡಳಿಯ ಟೂಲ್ ಕಿಟ್ ಎಂದು ಸಾರಿ ಸಾರಿ ಹೇಳುವುದಕ್ಕೆ ಸಾಕ್ಷ್ಯ ಇಲ್ಲಿದೆ ಎಂದು ಬಿಜೆಪಿ ತನ್ನ ಟ್ವೀಟ್ ನಲ್ಲಿ ಆರೋಪ ಮಾಡಿದೆ.

ಸದ್ಯ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ದಿವ್ಯಾ ಹಾಗರಗಿ ಫೋಟೋ, ಡಿಕೆಎಸ್ ಅವರೊಂದಿಗೆ ಇರೋದು ಹಲವು ಚರ್ಚೆಗಳಿಗೆ ಕಾರಣವಾಗಿದೆ.

Edited By : Nirmala Aralikatti
PublicNext

PublicNext

26/04/2022 03:48 pm

Cinque Terre

50.14 K

Cinque Terre

17