ಬೆಂಗಳೂರು: ಪಿಎಸ್‌ಐ ಪರೀಕ್ಷೆ ಅಕ್ರಮದಲ್ಲಿ ಭಾಗಿ ಆಗಿದ್ದಾರೆಂಬ ಆರೋಪ ಎದುರಿಸುತ್ತಿರುವ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಜೊತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಇರುವ ಫೋಟೋ ವೈರಲ್ ಆಗುತ್ತಿದೆ. ಈ ಫೋಟೋ ಸಮೇತ ಟ್ವೀಟ್ ಮಾಡಿರುವ ಬಿಜೆಪಿ ಕಾಂಗ್ರೆಸ್ ನಾಯಕರಿಗೆ ಹಲವು ಪ್ರಶ್ನೆಗಳನ್ನು ಕೇಳಿದೆ.
'ಪ್ರಿಯಾಂಕ್ ಖರ್ಗೆ ಅವರೇ ಪೂರ್ಣ ಪ್ರಮಾಣದ ಸರ್ಕಾರವೇ ದಿವ್ಯಾ ಹಾಗರಗಿ ಪರ ಇದೆ ಎಂದು ಆರೋಪಿಸಿದ್ದಿರಿ. ಆದರೆ ಇಲ್ಲಿ ನೋಡಿ!! ಈ ಚಿತ್ರ ಏನನ್ನು ಹೇಳುತ್ತಿದೆ? ಎಷ್ಟೊಂದು ತನ್ಮಯರಾಗಿ ಮಾತಾಡುತ್ತಿದ್ದಾರೆ. ನಿಮ್ಮ ಪಕ್ಷದ ಯಾರು ಯಾರು ಗೋಡಂಬಿ-ಬಾದಾಮಿ ತಿಂದಿರಬಹುದು ಎಂದು ವಿವರಿಸಬಹುದೇ? ಎಂದು ರಾಜ್ಯ ಬಿಜೆಪಿ ಪ್ರಶ್ನೆ ಮಾಡಿದೆ.
'ಸಿಡಿ ವಿವಾದ, ಹಿಜಾಬ್ ಸಂಘರ್ಷ, 40% ಪರ್ಸೆಂಟ್ ಕಮಿಷನ್, ಹರ್ಷ ಕೊಲೆ, ಹುಬ್ಬಳ್ಳಿ ಗಲಭೆ, ಪಿಎಸ್ಐ ನೇಮಕ ಹಗರಣ. ಈ ಎಲ್ಲದಕ್ಕೂ ಸೂತ್ರಧಾರ ಒಬ್ಬರೇ. ಮಾನ್ಯ ಡಿ.ಕೆ ಶಿವಕುಮಾರ್ ಅವರೇ, ನೀವೆಷ್ಟೇ ರಹಸ್ಯ ಕಾರ್ಯಚರಣೆ ನಡೆಸಿದರೂ ಸತ್ಯ ಒಂದಿಲ್ಲೊಂದು ದಿನ ಬಯಲಾಗಲೇಬೇಕಲ್ಲವೇ?' ಎಂದು ಇನ್ನೊಂದು ಟ್ವೀಟ್ ಮೂಲಕ ಪ್ರಶ್ನೆ ಮಾಡಿರುವ ರಾಜ್ಯ ಬಿಜೆಪಿ ಡಿ.ಕೆ ಶಿವಕುಮಾರ್‌ಗೆ ನೇರವಾಗಿ ಟಾಂಗ್ ಕೊಟ್ಟಿದೆ.
PublicNext
26/04/2022 06:35 pm